ಉಪಚುನಾವಣೆ ಮಾತ್ರವಲ್ಲ: ಮುಂದಿನ ತಿಂಗಳುಗಳಲ್ಲಿ ಎದುರಾಗಲಿವೆ ಸಾಲು ಸಾಲು ಚುನಾವಣೆಗಳು!
ಕೊರೋನಾ ಕರಿನೆರಳಿನಲ್ಲಿಯೂ ರಾಜ್ಯದಲ್ಲಿ ಜನತೆ ಹಬ್ಬದ ಮೂಡ್ ನಲ್ಲಿದ್ದಾರೆ. ಇದರ ಜೊತೆಗೆ ವಿಧಾನಸಭೆ ಉಪಚುನಾವಣೆ ಮತ್ತು ಪರಿಷತ್ ಚುನಾವಣೆಗಳು ನಡೆಯುತ್ತಿದೆ.

ಬೆಂಗಳೂರು: ಕೊರೋನಾ ಕರಿನೆರಳಿನಲ್ಲಿಯೂ ರಾಜ್ಯದಲ್ಲಿ ಜನತೆ ಹಬ್ಬದ ಮೂಡ್ ನಲ್ಲಿದ್ದಾರೆ. ಇದರ ಜೊತೆಗೆ ವಿಧಾನಸಭೆ ಉಪಚುನಾವಣೆ ಮತ್ತು ಪರಿಷತ್ ಚುನಾವಣೆಗಳು ನಡೆಯುತ್ತಿದೆ.
ಕೇವಲ ಉಪಚುನಾವಣೆ ಮಾತ್ರವಲ್ಲ ರಾಜ್ಯದಲ್ಲಿ ಮುಂದಿನ ಆರರಿಂದ 8 ತಿಂಗಳಲ್ಲಿ ಕನಿಷ್ಠ ಪಕ್ಷ ಆರು ಚುನಾವಣೆಗಳು ಎದುರಾಗಲಿವೆ. ಗ್ರಾಮ ಪಂಚಾಯತ್ ಮತ್ತು ಲೋಕಸಭೆ ಉಪಚನಾವಣೆಗಳು ನಡೆಯಲಿವೆ.
ನವೆಂಬರ್ 3ರಂದು ಆರ್ ನಡೆಯುವ ಉಪ ಚುನಾವಣೆಗಾಗಿ ಆರ್ ನಗರ ಮತ್ತು ಶಿರಾದಲ್ಲಿ ಈಗಾಗಲೇ ಅಬ್ಬರದ ಪ್ರಚಾರದ ಆರಂಭವಾಗಿದೆ. ನಾಲ್ಕು ವಿಧಾನ ಪರಿಷತ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಎರಡು ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರಗಳಿಗೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ.
ಹೈಕೋರ್ಟ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಗ್ರಾಮೀಣಾಭಿವದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಡಿಸೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಮೇ 2021 ಕ್ಕೆ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಅಧಿಕಾರವದಿ ಮುಗಿಯಲಿದೆ, ಇದರ ಜೊತೆಗೆ ಸ್ಥಳೀಯ ಸಂಸ್ಥೆಗಳಿಗೂ ಚುನಾವಣೆ ನಡೆಸಬೇಕಿದೆ,
ಇದರ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನೇಮಿಸಿರುವ ಆಡಳಿತಾಧಿಕಾರಿಗಳ ಅವಧಿ ಮುಗಿಯಲಿದ್ದು, ಚುನಾವಣೆ ನಡೆಸಬೇಕಾಗಿದೆ. ಸದ್ಯ ರಾಜ್ಯ ಸರ್ಕಾರ ವಾರ್ಡ್ ಗಳ ಪುನರ್ ವಿಂಗಡನೆ ಮಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


