ಪರಿಷತ್ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಮೂರು ಪಕ್ಷಗಳು ಸಹ ಬಿರುಸಿನ ಪ್ರಚಾರ ನಡೆಸಿದ್ದು, ಸೋಮವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಕಾರ್ಯ ಅಂತ್ಯಗೊಂಡಿದೆ.

ಬೆಂಗಳೂರು: ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪ್ರಚಾರ ಕಾರ್ಯ ಅಂತ್ಯವಾಗಿದ್ದು ಅಕ್ಟೋಬರ್ 28ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ರವೆರೆಗೆ ಮತದಾನ ನಡೆಯಲಿದ್ದು, ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದೆ. ಮೂರು ಪಕ್ಷಗಳು ಸಹ ಬಿರುಸಿನ ಪ್ರಚಾರ ನಡೆಸಿದ್ದು, ಸೋಮವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಕಾರ್ಯ ಅಂತ್ಯಗೊಂಡಿದೆ.
ಒಟ್ಟು ಕಣದಲ್ಲಿ 15 ಅಭ್ಯರ್ಥಿಗಳಿದ್ದು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಆರ್. ಚೌಡರೆಡ್ಡಿ, ಕಾಂಗ್ರೆಸ್‌ನಿಂದ ರಮೇಶ್ ಬಾಬು ಕಣಕ್ಕಿಳಿಯಲಿದ್ದಾರೆ. ಬಿಜೆಪಿಯಿಂದ ಚಿದಾನಂದ ಗೌಡ ಅಭ್ಯರ್ಥಿಯಾಗಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಎಸ್.ವಿ. ಸಂಕನೂರ, ಕಾಂಗ್ರೆಸ್‌ನಿಂದ ಕುಬೇರಪ್ಪ, ಅಭ್ಯರ್ಥಿಯಾಗಿದ್ದಾರೆ.
ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಶರಣಪ್ಪ ಮಟ್ಟೂರ, ಬಿಜೆಪಿಯಿಂದ ಶಶಿಲ್ ನಮೋಶಿ, ಜೆಡಿಎಸ್‌ನಿಂದ ತಿಮ್ಮಯ್ಯ ಪುರ್ಲೆ ಅಭ್ಯರ್ಥಿಗಳಾಗಿದ್ದಾರೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಪುಟ್ಟಣ್ಣ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ನಿಂದ ಎ. ಪಿ. ರಂಗನಾಥ್, ಕಾಂಗ್ರೆಸ್‌ನಿಂದ ಪ್ರವೀಣ್ ಪೀಟರ್ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


