ಕುರುಕ್ಷೇತ್ರ ಸಿನಿಮಾ ಮುಗಿಯುತ್ತಿದ್ದಂತೆ ನನ್ನ-ಮುನಿರತ್ನ ಸಂಬಂಧ ಅಂತ್ಯ: ನಿಖಿಲ್ ಕುಮಾರಸ್ವಾಮಿ
ಮುನಿರತ್ನ ನನ್ನ ಗಾಡ್‌ಫಾದರ್ ಅಲ್ಲ. ನಾನೊಬ್ಬ ನಟ, ಮುನಿರತ್ನ ನಿರ್ಮಾಪಕರಷ್ಟೇ. ಕುರುಕ್ಷೇತ್ರ ಸಿನಿಮಾ ಮುಗಿಯುತ್ತಿದ್ದಂತೆ ಅವರ ಹಾಗೂ ನನ್ನ ಸಂಬಂಧ ಮುಗಿದಿದೆ ಎಂದು ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಮುನಿರತ್ನ ನನ್ನ ಗಾಡ್‌ಫಾದರ್ ಅಲ್ಲ. ನಾನೊಬ್ಬ ನಟ, ಮುನಿರತ್ನ ನಿರ್ಮಾಪಕರಷ್ಟೇ. ಕುರುಕ್ಷೇತ್ರ ಸಿನಿಮಾ ಮುಗಿಯುತ್ತಿದ್ದಂತೆ ಅವರ ಹಾಗೂ ನನ್ನ ಸಂಬಂಧ ಮುಗಿದಿದೆ ಎಂದು ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಅವರ ಪರ ರೋಡ್‌ಶೋನಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮುನಿರತ್ನ ನಿರ್ಮಾಪಕರು, ನಾನೊಬ್ಬ ನಟ ಅಷ್ಟೇ. ಕುರುಕ್ಷೇತ್ರ ಸಿನಿಮಾದಲ್ಲಿ ನನಗೊಂದು ಪಾತ್ರ ಕೊಟ್ಟಿದ್ದರು. ಅದನ್ನು ನಾನು ಮಾಡಿದ್ದೇನೆ. ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ ಎಂದು ಹೇಳಿದರು.
ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನ್ನ ವೈಯಕ್ತಿಕ ಕಾರಣಕ್ಕಾಗಿ ಪಕ್ಷದ ಕಾರ್ಯಕರ್ತರಿಗೆ ವಿಷ ಹಾಕುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ. ಈ ಬಗ್ಗೆ ಹಲವು ವದಂತಿಗಳನ್ನು ಕ್ಷೇತ್ರದಲ್ಲಿ ಹಬ್ಬಿಸಿದ್ದಾರೆ. ಅವುಗಳಿಗೆ ಕಿವಿಗೊಡುವ ಕೆಲಸವನ್ನು ಕಾರ್ಯಕರ್ತರು ಮಾಡಬಾರದು. ಕೃಷ್ಣಮೂರ್ತಿ ಅವರ ಗೆಲುವಿಗೆ ಕೆಲಸ ಮಾಡಿ ಎಂದು ಕರೆ ನೀಡಿದರು.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವಿನ ರೇಸ್‌ನಲ್ಲಿ ಇಲ್ಲ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಅದು ತಪ್ಪು, ತಳಮಟ್ಟದಲ್ಲಿ ಜೆಡಿಎಸ್ ಗೆಲುವಿನ ತರಂಗ ಕಾಣುತ್ತಿದೆ. ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚಾ ಗಿರುವುದು ಗೊತ್ತಾಗುತ್ತಿದೆ. ಕೃಷ್ಣಮೂರ್ತಿ ಅವರ ತಂದೆ ವೆಂಕಟೇಶ್ ಜೆಡಿಎಸ್‌ಗಾಗಿ 25 ವರ್ಷ ದುಡಿದಿದ್ದಾರೆ. ಸೋತ ತಕ್ಷಣ ಪಕ್ಷ ಬಿಟ್ಟು ಹೋಗುವ ಅಭ್ಯರ್ಥಿಗಳಿಗಿಂತ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದು ಗೆಲ್ಲುವ ವಿಶ್ವಾಸ ಇದೆ ಎಂದರು.
ಇನ್ನು, ಕಾಂಗ್ರೆಸ್‌ನ ಜಾತಿ ಕಾರ್ಡ್ ಬಗ್ಗೆ ಮಾತನಾಡಿದ ಅವರು, ಈಗ ಒಕ್ಕಲಿಗ ಜಾತಿಯನ್ನು ಚುನಾವಣೆಯಲ್ಲಿ ತಂದಿರುವ ಕಾಂಗ್ರೆಸ್‌ನವರೇ ಮುನಿರತ್ನಂ ಅವರನ್ನು ಈ ಹಿಂದೆ ಎರಡು ಬಾರಿ ಟಿಕೆಟ್ ನೀಡಿ ಗೆಲ್ಲಿಸಿದ್ದಾರೆ. ಆಗ ಇರದ ಜಾತಿ ಮೇಲಿನ ಪ್ರೀತಿ, ಅವರಿಗೆ ಈಗ ಬಂದಿದೆ. ನಮ್ಮ ಅಭ್ಯರ್ಥಿಯೂ ಒಕ್ಕಲಿಗ ಜಾತಿಗೆ ಸೇರಿದವರು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


