ಆರ್'ಆರ್'ನಗರ, ಶಿರಾ ಉಪಚುನಾವಣೆ: ಬಿಜೆಪಿಗೆ ವರದಾನವಾಗಲಿದೆಯೇ ಅಂಚೆ ಮತದಾನ?
ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನದ ವೇಳೆ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರು, ಕೊರೋನಾ ಸೋಂಕಿತರಿಗೆ ಅಂಚೆ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಮಾಡಿಕೊಂಡಿದ್ದು, ಯಾವೆಲ್ಲಾ ಮತದಾರರು ಅಂಚೆ ಮತದಾನದ ಪರವಾಗಿದ್ದಾರೆಂಬುದನ್ನು...

ಬೆಂಗಳೂರು: ಕೊರೋನಾ ಸೋಂಕು ಭೀತಿ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತದಾನದ ವೇಳೆ 80 ವರ್ಷ ಮೇಲ್ಪಟ್ಟ ಹಾಗೂ ಅಂಗವಿಕಲರು, ಕೊರೋನಾ ಸೋಂಕಿತರಿಗೆ ಅಂಚೆ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಮಾಡಿಕೊಂಡಿದ್ದು, ಯಾವೆಲ್ಲಾ ಮತದಾರರು ಅಂಚೆ ಮತದಾನದ ಪರವಾಗಿದ್ದಾರೆಂಬುದನ್ನು ಕಂಡು ಹಿಡಿಯಲು ರಾಜ್ಯದ ಪ್ರಮುಖ ಮೂರು ಪಕ್ಷಗಳು ಯತ್ನಗಳನ್ನು ನಡೆಸುತ್ತಿವೆ. ಈ ನಡುವೆ ಕೆಲ ತಜ್ಞರು ಅಂಚೆ ಮತದಾನ ಆಡಳಿತಾರೂಢ ಪಕ್ಷದ ಪರವಾಗಿಯೇ ಇರಲಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಹಿರಿಯರು, ಅಂಗವಿಕಲರು ಹಾಗೂ ಕೊರೋನಾ ಸೋಂಕು ಪೀಡಿತರು, ಸರ್ಕಾರಿ ಅಧಿಕಾರಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಶಿರಾದಲ್ಲಿ ಈಗಾಗಲೇ 6,000 ಜನರು ಅಂಚೆ ಮೂಲಕ ಬುಧವಾರ ಹಾಗೂ ಗುರುವಾರ ತಮ್ಮ ಮತಗಳನ್ನು ಹಾಕಿದ್ದು, ಈ ಮತಗಳನ್ನು ಸಂಗ್ರಹಿಸಲಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಶುಕ್ರವಾರ ಮತಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಚುನಾವಣಾ ಆಯೋಗದ ಸಿಇಒ ಸಂಜೀವ್ ಕುಮಾರ್ ಅವರು ಹೇಳಿದ್ದಾರೆ.
ರಾಜಕೀಯ ತಜ್ಞರಾಗಿರುವ ಬಿಎಸ್. ಮೂರ್ತಿಯವರು ಮಾತನಾಡಿ, ಇದೇ ಮೊದಲ ಬಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಂಚೆ ಮತದಾನದ ಪರವಾಗಿದ್ದಾರೆ. ಅಂಚೆ ಮತದಾನ ಸಾಮಾನ್ಯವಾಗಿ ಆಡಳಿತಾರೂಢ ಪಕ್ಷದ ಪರವಾಗಿಯೇ ಇರುತ್ತದೆ. ಅಂಚೆ ಮೂಲಕ ಬಂದ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಅಂಚೆ ಮತದಾನ ಅವಕಾಶ ಇರುವ ಹಿನ್ನೆಲೆಯಲ್ಲಿ ಹೆಚ್ಚೆಚ್ಚು ಜನರು ಮತಹಾಕಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


