ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತಿನಲ್ಲಿ ಹೇಳಿಕೆ ನೀಡಿದ್ದಾರಾ? ಸಿ.ಟಿ ರವಿ ತಿರುಗೇಟು!
ಡ್ರಗ್ಸ್ ಮಾಫಿಯಾದ ಹಣದಿಂದ ಸಮ್ಮಿಶ್ರ ಸರ್ಕಾರ ಪತನವಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಡ್ರಗ್ಸ್ ಮಾಫಿಯಾದ ಹಣದಿಂದ ಸಮ್ಮಿಶ್ರ ಸರ್ಕಾರ ಪತನವಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಅವರನ್ನು ಪರೀಕ್ಷೆಗೆ ಒಳಪಡಿಸಬೇಕಾದ ಅಗತ್ಯ ಇದೆ ಎಂದರು. ಡ್ರಗ್ಸ್ ಹಣದಿಂದ ಮೈತ್ರಿ ಸರ್ಕಾರ ಪತನವಾಗಿದೆ ಎಂದು ಎಚ್‌ಡಿಕೆ ಹೇಳಿಕೆ ನೀಡುತ್ತಾರೆ. ಹಾಗಾದರೆ ಅವರು ಮುಖ್ಯಮಂತ್ರಿ ಆಗಿದ್ದಾಗ ಸುಮ್ಮನಿದ್ದದ್ದು ಏಕೆ ಎಂದು ಪ್ರಶ್ನಿಸಿದರು.
ಅವರಿಗೆ ಹಾಗೂ ಡ್ರಗ್ಸ್ ಮಾಫಿಯಾಗೆ ಭಾಂದವ್ಯ ಇತ್ತಾ ಎಂದು ಪ್ರಶ್ನಿಸಿದರ ಸಿ.ಟಿ ರವಿ ಅವರನ್ನು ಪರೀಕ್ಷೆಗೆ ಒಳಪಡಿಸುವ ಅಗತ್ಯ ಇದೆ, ಅವರು ಸಹಜ ಸ್ಥಿತಿಯಲ್ಲಿ ಹೇಳಿದ್ದಾರೋ ಅಥವಾ ಮತ್ತಿನಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರಾ ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


