ಬಿಜೆಪಿಗೆ ಅನುಕೂಲವಾಗುವಂತೆ ಸರ್ಕಾರ ಗ್ರಾಮಪಂಚಾಯತ್ ಮೀಸಲಾತಿ ಸಿದ್ದಪಡಿಸಿದೆ: ದೇವೇಗೌಡ
ಗ್ರಾಮ ಪಂಚಾಯತ್ ಚುನಾವಣೆಗಾಗಿ ಸರ್ಕಾರ ಸಿದ್ದಪಡಿಸಿರುವ ಮೀಸಲಾತಿ ಸಂಪೂರ್ಣ ರಾಜಕೀಯವಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ಇದರ ವಿರುದ್ಧ ಹೋರಾಟ ನಡೆಸುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಸಿದ್ದಾರೆ.

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗಾಗಿ ಸರ್ಕಾರ ಸಿದ್ದಪಡಿಸಿರುವ ಮೀಸಲಾತಿ ಸಂಪೂರ್ಣ ರಾಜಕೀಯವಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ಇದರ ವಿರುದ್ಧ ಹೋರಾಟ ನಡೆಸುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಜೆಡಿಎಸ್ ಮುಖಂಡರು ಮತ್ತು ಜಿಲ್ಲಾ ಹಾಗೂ ತಾಲೂಕು ಅಧ್ಯಕ್ಷರ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು ಮೀಸಲಾತಿ ಪಟ್ಟಿ ವಿರುದ್ಧ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಜೆಡಿಎಸ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ಸಮಯದಲ್ಲಿ ಪಕ್ಷವನ್ನು ವ್ಯವಸ್ಥಿತ ರೀತಿಯಲ್ಲಿ ನಿರ್ಮಿಸಬೇಕೆಂದು ಅವರು ಆಗ್ರಹಿಸಿದರು. ಈಗಾಗಲೇ ಗ್ರಾಮ ಪಂಚಾಯತಿ ಮೀಸಲಾತಿ ಪಟ್ಟಿ ಬಿಡುಗಡೆಯಾಗಿದೆ, ಇದರ ವಿರುದ್ಧ ಹೋರಾಟ ನಡೆಸುವುದಾಗಿ ದೇವೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ತಮ್ಮ ಅವಶ್ಯಕತೆಗೆ ಅನುಗುಣವಾಗಿ ಮೀಸಲಾತಿ ಪಟ್ಟಿ ಸಿದ್ದಮಾಡಿಕೊಂಡಿದೆ, ಜೆಡಿಎಸ್ ಮೇಲುಗೈ ಇರುವ ಪ್ರದೇಶಗಳಲ್ಲಿ ಮೀಸಲಾತಿ ಬದಲಾವಣೆ ಮಾಡಲಾಗಿದೆ ಎಂದು ಶಾಸಕ ಬಂಡೆಪ್ಪ ಕಾಶೆಂಪೂರ್ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


