ಡ್ರಗ್ಸ್ ದಂಧೆಯಲ್ಲಿ ಚಿತ್ರರಂಗದ ಹೆಣ್ಣು ಮಕ್ಕಳನೇ ಫಿಕ್ಸ್ ಮಾಡುತ್ತಿರುವುದಕ್ಕೆ ವಿಷಾಧವಿದೆ: ವಿಶ್ವನಾಥ್
ಡ್ರಗ್ಸ್ ದಂಧೆಯಲ್ಲಿ ಬರೀ ಚಿತ್ರರಂಗದವರನ್ನೇ, ಅದರಲ್ಲೂ ಹೆಣ್ಣು ಮಕ್ಕಳನ್ನೇ ಫಿಕ್ಸ್ ಮಾಡಲಾಗುತ್ತಿದೆ. ಈ ಬಗ್ಗೆ ನನಗೆ ವಿಷಾದವಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ಮೈಸೂರು: ಡ್ರಗ್ಸ್ ದಂಧೆಯಲ್ಲಿ ಬರೀ ಚಿತ್ರರಂಗದವರನ್ನೇ, ಅದರಲ್ಲೂ ಹೆಣ್ಣು ಮಕ್ಕಳನ್ನೇ ಫಿಕ್ಸ್ ಮಾಡಲಾಗುತ್ತಿದೆ. ಈ ಬಗ್ಗೆ ನನಗೆ ವಿಷಾದವಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಇಷ್ಟವಿಲ್ಲದ ಹಲವಾರು ಕೆಲಸಗಳನ್ನು ಮಾಡುವಂತೆ ಹೆಣ್ಣು ಮಕ್ಕಳ ಮೇಲೆ ಒತ್ತಡಗಳು ಬರುತ್ತಿವೆ. ಹೀಗಾಗಿ, ಇಂಥ ಕೃತ್ಯಗಳಿಗೆ ಮೊರೆ ಹೋಗುತ್ತಿದ್ದಾರೆ ಎಂದರು.
‘ಪೊಲೀಸರಿಗೆ ಎಲ್ಲಾ ವಿಚಾರ ಗೊತ್ತಿದೆ. ಗಾಂಜಾ, ಪಾರ್ಟಿ, ಅಫೀಮು ಹೊಸ ವಿಚಾರವೇನಲ್ಲ. ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತಿದೆ’ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


