ರಾಜಕೀಯ

ಅಧಿವೇಶನ ಅವಧಿ ವಿಸ್ತರಣೆ ಮಾಡಿ: ಸ್ಪೀಕರ್'ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಸೆಪ್ಟೆಂಬರ್ 21ರಿಂದ ವಿಧಾನಮಂಡಲ ಅಧಿವೇಶನವನ್ನು ಕೇವಲ 8 ದಿನಗಳವರೆಗೆ ಮಾತ್ರ ನಡೆಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಕನಿಷ್ಟ ಮೂರು ವಾರಗಳವರೆಗೆ ಆದರೂ ವಿಸ್ತರಿಸಬೇಕೆಂದು ಕೋರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

ಅಧಿವೇಶನ ಅವಧಿ ವಿಸ್ತರಣೆ ಮಾಡಿ: ಸ್ಪೀಕರ್'ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ
ಸಿದ್ದರಾಮಯ್ಯ
Published On :

ಬೆಂಗಳೂರು: ಸೆಪ್ಟೆಂಬರ್ 21ರಿಂದ ವಿಧಾನಮಂಡಲ ಅಧಿವೇಶನವನ್ನು ಕೇವಲ 8 ದಿನಗಳವರೆಗೆ ಮಾತ್ರ ನಡೆಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಕನಿಷ್ಟ ಮೂರು ವಾರಗಳವರೆಗೆ ಆದರೂ ವಿಸ್ತರಿಸಬೇಕೆಂದು ಕೋರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. 

ರಾಜ್ಯ ಸರ್ಕಾರ ಸುಮಾರು 20 ಸುಗ್ರೀವಾಜ್ಞೆ ಸೇರಿದಂತೆ 35ಕ್ಕೂ ಅಧಿಕ ಮಸೂದೆಗಳನ್ನು ಮಂಡಿಸುವ ಇರಾದೆ ಇಟ್ಟುಕೊಂಡಿದೆ. ಕೇವಲ 8 ದಿನಗಳ ಅಧಿವೇಶನದಲ್ಲಿ ಅಷ್ಟೆಲ್ಲ ವಿಷಯಗಳನ್ನು ಚರ್ಚಿಸುವುದು ಸಾಧ್ಯವಾಗುವುದಿಲ್ಲ, ಹಾಗಾಗಿ ಅಧಿವೇಶನದ ಅವಧಿಯನ್ನು ಮೂರು ವಾರಗಳಿಗೆ ವಿಸ್ತರಿಸಬೇಕೆಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

‘‘ರಾಜ್ಯ ಈಗ ಅತ್ಯಂತ ಸಂಕಷ್ಟದ ಸಮಯದಲ್ಲಿದೆ, ಕೊವಿಡ್-19 ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಸೋಂಕಿಗೆ ಈಗಾಗಲೇ 6,500ಕ್ಕು ಹೆಚ್ಚು ಜನ ಬಲಿಯಾಗಿದ್ದಾರೆ. ಉತ್ತರ ಕರ್ನಾಟಕದ ಹಲವಾರು ಭಾಗಗಳಲ್ಲಿ ಜನ ನೆರೆ ಹಾವಳಿಯಿಂದ ತತ್ತರಿಸಿದ್ದಾರೆ. ಅಲ್ಲದೆ ಅಧಿವೇಶನವನ್ನು ಕನಿಷ್ಠ 60 ದಿನಗಳವರೆಗೆ ನಡೆಸಬೇಕೆಂದು ಕರ್ನಾಟಕ ರಾಜ್ಯ ವಿಧಾನಮಂಡಲ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ ಸೂಚಿಸುತ್ತದೆ. ಆದರೆ, ಸರ್ಕಾರ ಜ್ವಲಂತ ಸಮಸ್ಯೆಗಳನ್ನು ಚರ್ಚಿಸದೆ ಪಲಾಯನಗೈಯಲು ಪ್ರಯತ್ನಿಸುತ್ತಿದೆ. ಅದಕ್ಕೆ ಅವಕಾಶ ನೀಡದೆ ಅಧಿವೇಶನವನ್ನು ಮೂರು ವಾರಗಳಿಗೆ ವಿಸ್ತರಿಸಬೇಕೆಂದು ಮನವಿ ಮಾಡುತ್ತೇನೆ,’’ ಅಂತ ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.