ಸುರ್ಜೇವಾಲ ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿ, ಎಚ್ ಕೆ ಪಾಟಿಲ್, ದಿನೇಶ್ ಗುಂಡೂರಾವ್ ಗೆ ಹೊಸ ಜವಾಬ್ದಾರಿ
ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ 'ರಣದೀಪ್ ಸಿಂಗ್ ಸುರ್ಜೇವಾಲ' ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ನವದೆಹಲಿ: ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ 'ರಣದೀಪ್ ಸಿಂಗ್ ಸುರ್ಜೇವಾಲ' ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ ಎಐಸಿಸಿ ಪುನರ್ ರಚನೆಗೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ರಣದೀಪ್ ಸಿಂಗ್ ನೇಮಕಗೊಂಡಿದ್ದು, ಕರ್ನಾಟಕ ಉಸ್ತುವಾರಿಯಾಗಿದ್ದ ಕೆಸಿ ವೇಣುಗೋಪಾಲ್ ಅವರಿಗೆ ಕೊಕ್ ನೀಡಲಾಗಿದೆ.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಿದ್ದ ಕೆ.ಸಿ. ವೇಣುಗೋಪಾಲ್ ಅವರನ್ನು ಕಡೆಗೂ ಬದಲಿಸಲಾಗಿದೆ.
ಇನ್ನೂ, ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಂ ನಬಿ ಅಜಾದ್ ಕೈಬಿಡಲಾಗಿದೆ.
ಮಹಾರಾಷ್ಟ್ರ ಉಸ್ತುವಾರಿಯಾಗಿ ಹೆಚ್ ಕೆ ಪಾಟೀಲ್ ನೇಮಕಗೊಂಡಿದ್ದರೆ, ತಮಿಳುನಾಡು, ಪುದುಚೇರಿ ಉಸ್ತುವಾರಿಯಾಗಿ ದಿನೇಶ್ ಗುಂಡೂರಾವ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ರಾಷ್ಟ್ರೀಯ ಕಾಂಗ್ರೆಸ್‌ನ ಸಂಘಟನಾ ಸಮಿತಿಗಳನ್ನು ಶುಕ್ರವಾರ ಪುನಾರಚಿಸಲಾಗಿದೆ. ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರಾಗಿ ಮುಂದುವರಿದಿದ್ದಾರೆ. ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರನ್ನೂ ಸಿಡಬ್ಲ್ಯುಸಿ ಕಾಯಂ ಆಹ್ವಾನಿತರಾಗಿ ಮುಂದುವರಿದಿದ್ದಾರೆ. ಇವರ ಜೊತೆಗೆ ಕೆಪಿಸಿಸಿಯ ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಚಿವ ಎಚ್.ಕೆ. ಪಾಟೀಲ್ ಅವರನ್ನು ಸಿಡಬ್ಲ್ಯುಸಿ ಕಾಯಂ ಆಹ್ವಾನಿತರ ಪಟ್ಟಿಗೆ ಹೊಸದಾಗಿ ಸೇರ್ಪಡೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


