ರಾಜಕೀಯ

'ಜಮೀರ್‌ ದಡ್ಡ ಅಲ್ಲ ಕಿಲಾಡಿ, ಆತ ಎಲ್ಲಾ ವರ್ಗದವರ ಶಾಸಕ: ಹಿಂದೂಗಳೆಲ್ಲಾ ಒಳ್ಳೆಯವರಲ್ಲ, ಮುಸ್ಲಿಮರೆಲ್ಲಾ ಕೆಟ್ಟವರಲ್ಲ'

ಜಮೀರ್ ಅಹ್ಮದ್ ಖಾನ್ ದಡ್ಡ ಅಲ್ಲ, ಕಿಲಾಡಿ, ಆತ ಕೇವಲ ಮುಸಲ್ಮಾನರ ಎಂಎಲ್‌ಎ ಅಲ್ಲ, ಬದಲಿಗೆ ಎಲ್ಲಾ ವರ್ಗದವರ ಎಂಎಲ್‌ಎ ಎಂದು ವಸತಿ ವಿ. ಸೋಮಣ್ಣ ಕಾಂಗ್ರೆಸ್ ಶಾಸಕ ಜಮೀರ್ ಅವರನ್ನು ಹಾಡಿ ಹೊಗಳಿದ್ದಾರೆ.

'ಜಮೀರ್‌ ದಡ್ಡ ಅಲ್ಲ ಕಿಲಾಡಿ, ಆತ ಎಲ್ಲಾ ವರ್ಗದವರ ಶಾಸಕ: ಹಿಂದೂಗಳೆಲ್ಲಾ ಒಳ್ಳೆಯವರಲ್ಲ, ಮುಸ್ಲಿಮರೆಲ್ಲಾ ಕೆಟ್ಟವರಲ್ಲ'
Published On :

ಬೆಂಗಳೂರು: ಜಮೀರ್ ಅಹ್ಮದ್ ಖಾನ್ ದಡ್ಡ ಅಲ್ಲ, ಕಿಲಾಡಿ, ಆತ ಕೇವಲ ಮುಸಲ್ಮಾನರ ಎಂಎಲ್‌ಎ ಅಲ್ಲ, ಬದಲಿಗೆ ಎಲ್ಲಾ ವರ್ಗದವರ ಎಂಎಲ್‌ಎ ಎಂದು ವಸತಿ ವಿ. ಸೋಮಣ್ಣ ಕಾಂಗ್ರೆಸ್ ಶಾಸಕ ಜಮೀರ್ ಅವರನ್ನು ಹಾಡಿ ಹೊಗಳಿದ್ದಾರೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿ ವಾರ್ಡ್‌ನಲ್ಲಿ ಈದ್ಗಾ ಮೈದಾನ ಕಾಂಪೌಂಡ್‌ ನಿರ್ಮಾಣಕ್ಕೆ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕೆಲಸಕ್ಕೂ
ಜಾತಿ, ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಇದು ನನ್ನ ಕರ್ತವ್ಯ. ಒಬ್ಬ ಜನಪ್ರತಿನಿಧಿಯಾಗಿ ನಾನು ನನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇನೆ. ನಾವು ಭಾರತೀಯರು, ಹಿಂದೂ-ಮುಸ್ಲಿಮರು ಒಂದೇ ಮನೆಯವರು. ನೀವೂ ಅಲ್ಲಾ ಅಂತೀರಾ, ನಾವು ಶಿವ ಅಂತೀವಿ, ಎಲ್ಲರಿಗೂ ದೇವರೊಬ್ಬನೇ ಎಂದರು.

ಬೆಂಗಳೂರು: ಹಿಂದೂಗಳೆಲ್ಲಾ ಒಳ್ಳೆಯವರಲ್ಲ, ಮುಸ್ಲಿಮರೆಲ್ಲಾ ಕೆಟ್ಟವರಲ್ಲ. ಎಲ್ಲಾ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದ್ರೆ ಅಲ್ಲಿ ದೆವ್ವ ಸೈತಾನ್‌ಗಳು ಕೂಡ ಇದ್ದೇ ಇರುತ್ತವೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.