ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ತಿರುಗಿ ಬೀಳಲು ಪ್ರತಿಪಕ್ಷ ಕಾಂಗ್ರೆಸ್ ಸಜ್ಜು
ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಶ್ನಾವಳಿಯೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮುಗಿ ಬೀಳಲು ಕಾಂಗ್ರೆಸ್ ಶಾಸಕರು ಸಜ್ಜುಗೊಂಡಿದ್ದಾರೆ.

ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಶ್ನಾವಳಿಯೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಮುಗಿ ಬೀಳಲು ಕಾಂಗ್ರೆಸ್ ಶಾಸಕರು ಸಜ್ಜುಗೊಂಡಿದ್ದಾರೆ.
ವಿವಿಧ ವಿಚಾರಗಳ ಬಗ್ಗೆ ಸರ್ಕಾರದ ವಿರುದ್ಧ ದಾಳಿ ನಡೆಸಲು ಪ್ರಶ್ನೆ ಬ್ಯಾಂಕ್ ಬಳಸಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ಕಾಂಗ್ರೆಸ್ ಶಾಸಕಾಂಗ ಸಭೆಯ ವೇಳೆಯಲ್ಲಿ ತನ್ನ ಸಹೋದ್ಯೋಗಿಗಳಿಗೆ ಹೇಳಿದ್ದಾರೆ.
ಪ್ರವಾಹ, ಸಾಂಕ್ರಾಮಿಕ ರೋಗ, ಕೋವಿಡ್-19 ಸಲಕರಣೆಗಳ ಖರೀದಿಯಲ್ಲಿ ಭ್ರಷ್ಟಾಚಾರ, ಜಿಎಸ್ ಟಿ ಪರಿಹಾರ, ಸಾಲದ ಹೆಚ್ಚಳ ಮತ್ತಿತರ ವಿಚಾರಗಳನ್ನು ಮುಂದಿಟುಕೊಂಡು ಸರ್ಕಾರದ ವಿರುದ್ಧ ತಿರುಗಿ ಬೀಳುವಂತೆ ಅವರು ಸೂಚಿದ್ದಾರೆ.
ಎಪಿಎಂಸಿ ಕಾಯ್ದೆ ತಿದ್ದುಪಡಿಗೂ ಮುನ್ನ ಅಭಿಪ್ರಾಯ ಸಂಗ್ರಹಿಸಲು ರಾಜ್ಯಸರ್ಕಾರಕ್ಕೆ ಕೇಂದ್ರ ಸರ್ಕಾರ ಹೇಳಿಲ್ಲ, ರಾಜ್ಯ ಸರ್ಕಾರವನ್ನು ಸ್ಥಳೀಯ ಸಂಸ್ಥೆಯಂತೆ ಕೇಂದ್ರ ಸರ್ಕಾರ ಪರಿಗಣಿಸಿದೆ. ಸುಗ್ರೀವಾಜ್ಞೆಗಳ ಮೂಲಕ ಅನೇಕ ತಿದ್ದುಪಡಿಗಳನ್ನು ಸರ್ಕಾರ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರವಾಹ ಮತ್ತು ಬರ ಪರಿಹಾರದ ಬಗ್ಗೆ ಗಮನ ಸೆಳೆಯುವ ನಿರ್ಣಯವನ್ನು ಮಂಡಿಸಲು ಪಕ್ಷವು ಎದುರು ನೋಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


