ರಾಜಕೀಯ

ಸಚಿವ ಸಂಪುಟದಲ್ಲಿ ಅಪಾರ ಪ್ರಮಾಣದ ಪ್ರಾದೇಶಿಕ ಅಸಮತೋಲನವಿದೆ: ರೇಣುಕಾಚಾರ್ಯ

ಅಬಕಾರಿ ಸಚಿವನಾಗಿದ್ದಾಗ ನಾನು ತುಂಬಾ ಶ್ರಮ ವಹಿಸಿ ಕೆಲಸ ಮಾಡಿದ್ದೇನೆ, ಹೀಗಾಗಿ ಮುಂದಿನ ಸಂಪುಟ ವಿಸ್ತರಣೆಯಲ್ಲಿ ನನಗೆ ಸಚಿವ ಸ್ಥಾನ ಸಿಗಲಿದೆ ಎಂದು ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ

ಸಚಿವ ಸಂಪುಟದಲ್ಲಿ ಅಪಾರ ಪ್ರಮಾಣದ ಪ್ರಾದೇಶಿಕ ಅಸಮತೋಲನವಿದೆ: ರೇಣುಕಾಚಾರ್ಯ
ರೇಣುಕಾಚಾರ್ಯ
Published On :

ದಾವಣಗೆರೆ: ಅಬಕಾರಿ ಸಚಿವನಾಗಿದ್ದಾಗ ನಾನು ತುಂಬಾ ಶ್ರಮ ವಹಿಸಿ ಕೆಲಸ ಮಾಡಿದ್ದೇನೆ, ಹೀಗಾಗಿ ಮುಂದಿನ ಸಂಪುಟ ವಿಸ್ತರಣೆಯಲ್ಲಿ ನನಗೆ ಸಚಿವ ಸ್ಥಾನ ಸಿಗಲಿದೆ ಎಂದು ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಸದ್ಯ ಅಸ್ಥಿತ್ವದಲ್ಲಿರುವ ಸಚಿವ ಸಂಪುಟದಲ್ಲಿ ಅಪಾರ ಪ್ರಮಾಣದ ಪ್ರಾದೇಶಿಕ ಅಸಮತೋಲನವಿದೆ, ಹೀಗಾಗಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.

ದಾವಣಗೆರೆ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಬೇಕಾದ ಅವಶ್ಯಕತೆಯಿದೆ, ಇದರಿಂದ ಜಿಲ್ಲೆಯಲ್ಲಿ ಬಿಜೆಪಿ ಮತ್ತಷ್ಟು ಪ್ರಬಲವಾಗಲಿದೆ ಎಂದು ಹೇಳಿದ್ದಾರೆ. ಸಚಿವಾಕಾಂಕ್ಷಿಯಾಗಿರುವ ರೇಣುಕಾಚಾರ್ಯ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ವರಿಷ್ಠರಿಗೆ ಮನವಿ ಮಾಡಿ ಬಂದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.