ರಾಜಕೀಯ

ಅಧಿವೇಶನಕ್ಕೆ ಸ್ಕಿಪ್: ಹಾಸನದ ರೆಸಾರ್ಟ್ ನಲ್ಲಿ ಕುಟುಂಬಸ್ಥರ ಜೊತೆ ಕುಮಾರಸ್ವಾಮಿ ರಿಲ್ಯಾಕ್ಸ್!

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹಾಸನದ ಹೊರವಲಯದ ರೆಸಾರ್ಟ್ ನಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ತಂಗಿದ್ದು, ವಿಧಾನಸಭೆ ಅಧಿವೇಶನಕ್ಕೆ ಗೈರಾಗಿದ್ದಾರೆ.

ಅಧಿವೇಶನಕ್ಕೆ ಸ್ಕಿಪ್: ಹಾಸನದ ರೆಸಾರ್ಟ್ ನಲ್ಲಿ ಕುಟುಂಬಸ್ಥರ ಜೊತೆ ಕುಮಾರಸ್ವಾಮಿ ರಿಲ್ಯಾಕ್ಸ್!
Published On :

ಹಾಸನ: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹಾಸನದ ಹೊರವಲಯದ ರೆಸಾರ್ಟ್ ನಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ತಂಗಿದ್ದು, ವಿಧಾನಸಭೆ ಅಧಿವೇಶನಕ್ಕೆ ಗೈರಾಗಿದ್ದಾರೆ. 

ಪತ್ನಿ ಅನಿತಾ, ಪುತ್ರ ನಿಖಿಲ್ ಮತ್ತು ಸೊಸೆ ರೇವತಿ ಜೊತೆ ಹಾಸನದ ಹೊಯ್ಸಳ ಗ್ರಾಮದಲ್ಲಿರುವ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

ಹೊಯ್ಸಳ ರೆಸಾರ್ಟ್ ನಲ್ಲಿ ತಂಗಿರುವ ಜೆಡಿಎಸ್ ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ರೆಸಾರ್ಟ್ ಗೆ ತೆರಳಿ ಕುಮಾರಸ್ವಾಮಿ ಅವರ ಗಂಟಲು ದ್ರವ ಮಾದರಿ ಪಡೆದರು.

ಎರಡು ದಿನಗಳಿಂದ ಯಾರನ್ನೂ ಭೇಟಿಯಾಗದೆ ಕುಟುಂಬ ಸದಸ್ಯರ ಜತೆ ರೆಸಾರ್ಟ್‌ನಲ್ಲಿ ಇದ್ದಾರೆ. ನಿಖಿಲ್ ಮತ್ತು ಅವರ ಪತ್ನಿ ರೇವತಿ ಹಾಸನದಲ್ಲಿರುವ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.

ಇನ್ನೂ ಹಾಸನ ಜಿಲ್ಲೆಯಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಸರ್ವಾಧಿಕಾರಕ್ಕೆ ಬೇಸತ್ತಿರುವ ಶಾಸಕ ಎಟಿ ರಾಮಸ್ವಾಮಿ ಕುಮಾರಸ್ವಾಮಿ ಅವರ ಜೊತೆ ಚರ್ಚಿಸಲು ಹಾಸನಕ್ಕೆ ಬರ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.