ಕೆಪಿಸಿಸಿ ವಕ್ತಾರರಾಗಿ ಲಕ್ಷ್ಮಿ ಹೆಬ್ಬಾಳಕರ್ ನೇಮಕ: ಆದೇಶ ಹೊರಡಿಸಿದ ಡಿ.ಕೆ. ಶಿವಕುಮಾರ್
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ರಾಜ್ಯ ಮಹಿಳಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ರಾಜ್ಯ ಮಹಿಳಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ಮಂಗಳವಾರ ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯ ಕಾಂಗ್ರೆಸ್ ನಲ್ಲಿ ಅತ್ಯಂತ ಪ್ರಭಾವಿಯಾಗಿದ್ದು, ಈವರೆಗೆ ನೀಡಲಾಗಿದ್ದ ಎಲ್ಲ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.
ತಮಗಿರುವ ಅನುಭವ, ತಿಳಿವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ತಕ್ಷಣವೇ ಅಧಿಕಾರ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಡಿಕೆ ಶಿವಕುಮಾರ್ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


