ಅವರಿಗೆ ಕೊರೋನಾ ಬಂದಿದೆ, ದೂರ ಉಳಿಯಲು ಹೇಳಿ: ಸದನದಲ್ಲಿ ಗೊಂದಲ ಸೃಷ್ಟಿಸಿದ ಪ್ರಿಯಾಂಕ್ ಖರ್ಗೆ ಕೊರೋನಾ ರಿಪೋರ್ಟ್!
ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕೊರೋನಾ ವೈದ್ಯಕೀಯ ವರದಿ ವಿಚಾರ ಶುಕ್ರವಾರ ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು.

ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕೊರೋನಾ ವೈದ್ಯಕೀಯ ವರದಿ ವಿಚಾರ ಶುಕ್ರವಾರ ವಿಧಾನಸಭೆಯಲ್ಲಿ ಚರ್ಚೆಗೆ ಗ್ರಾಸವಾಯಿತು.
ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆದ್ದರಿಂದ ಸದನ ಸಭೆಯಿಂದ ದೂರ ಉಳಿಯಲು ಹೇಳಿ ಎಂದು ಡಿಸಿಎಂ ಮಾಧುಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಇಲ್ಲ ಅವರ ವರದಿ ನೆಗೆಟಿವ್ ಬಂದಿದೆ ಎಂದು ಸ್ಪಷ್ಟಪಡಿಸಿದರು.
ಬಳಿಕ ಮಾತನಾಡಿದ ಪ್ರಿಯಾಂಕ್ ಖರ್ಗೆಯವರು ನನಗೆ ನೆಗೆಟಿವ್ ರಿಪೋರ್ಟ್ ಬಂದಿದೆ. ನನಗೂ ಜವಾಬ್ದಾರಿ ಇದೆ. ಹೀಗಾಗಿಯೇ ನಾನು ಮೊದಲ ಎರಡು ದಿನ ಸಭೆಯಿಂದ ದೂರ ಉಳಿದಿದ್ದೆ. ಒಂದು ಸಾರಿ ಪಾಸಿಟಿವ್, ಎರಡು ಬಾರಿ ನೆಗೆಟಿವ್ ಬಂತು. ಆ ಕಾರಣಕ್ಕಾಗಿ ಸ್ವಲ್ಪ ಗೊಂದಲ ಆಗಿತ್ತು, ನಾನು ನೆಗೆಟಿವ್ ರಿಪೋರ್ಟ್ ಬಂದಿರೋದನ್ನು ಹಾಕಿರಲಿಲ್ಲ ಅಷ್ಟೇ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಸ್ಪೀಕರ್ ಕಾಗೇರಿ ಅವರು, ಪ್ರಿಯಾಂಕ್ ಖರ್ಗೆ ಅವರದ್ದು ಕೊರೊನಾ ನೆಗೆಟಿವ್ ರಿಪೋರ್ಟ್ ನನ್ನ ಬಳಿ ಇದೆ. ಡೋಂಟ್ ವರಿ ಎಂದು ಸ್ಪಷ್ಟಪಡಿಸಿದರು.
ಮೊದಲು ನನಗೆ ಪಾಸಿಟಿವ್ ಎಂದು ವರದಿ ಕೊಟ್ಟಿದ್ದರು. ನಂತರ 48 ಗಂಟೆಗಳ ಬಳಿಕ ನೆಗೆಟಿವ್ ಬಂತು. ಮತ್ತೆ ಅನುಮಾನ ಬಂದು ವೈದ್ಯರನ್ನು ಸಂಪರ್ಕಿಸಿದೆ. ಮತ್ತೆ ಟೆಸ್ಟ್ ಮಾಡಿಸಿದ ಸಂದರ್ಭದಲ್ಲಿ ನೆಗೆಟಿವ್ ಬಂತು. ಆ ವೇಳೆ ವೈರಲಾಜಿಸ್ಟ್ ಅವರನ್ನು ಭೇಟಿ ಮಾಡಿ ಆರ್ ಟಿಪಿಸಿಆರ್ ಟೆಸ್ಟ್ ಗೆ ಮಾಡಿಸಿದೆ. ಅಲ್ಲದೇ ಯಾರಿಗೂ ತೊಂದರೆಯಾಗಬಾರದೆಂದು ಎರಡು ದಿನ ಮನೆಯಲ್ಲೇ ಇದ್ದೆ. ಕೊರೊನಾ ಬಂದೇ ಇಲ್ಲ ಎಂದು ವೈದ್ಯರು ಹೇಳಿದ್ದ ಕಾರಣ ನಾನು ಸದನಕ್ಕೆ ಹಾಜರಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


