ಅಧಿಕಾರಕ್ಕಾಗಿ ಬ್ರಿಟಿಷರಿಗಿಂತ ಹೆಚ್ಚಾಗಿ ಸಮಾಜವನ್ನು ಒಡೆದವರು ಸಿದ್ದರಾಮಯ್ಯ: ನಳಿನ್ ಕುಮಾರ್ ಕಟೀಲ್
ಟಿಪ್ಪು ಜಯಂತಿ ಹೆಸರಲ್ಲಿ ಗಲಭೆ ಸೃಷ್ಟಿಸಿ, ಲಿಂಗಾಯತ ವೀರಶೈವ ಅಂತಾ ಸಮಾಜ ಒಡೆದರು, ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಬ್ರಿಟಿಷರಿಗಿಂತ ಕೆಟ್ಟದಾಗಿ ಸಮಾಜವನ್ನು ಒಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ

ಬೆಳಗಾವಿ: ಟಿಪ್ಪು ಜಯಂತಿ ಹೆಸರಲ್ಲಿ ಗಲಭೆ ಸೃಷ್ಟಿಸಿ, ಲಿಂಗಾಯತ ವೀರಶೈವ ಅಂತಾ ಸಮಾಜ ಒಡೆದರು, ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಬ್ರಿಟಿಷರಿಗಿಂತ ಕೆಟ್ಟದಾಗಿ ಸಮಾಜವನ್ನು ಒಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಲೇವಡಿ ಮಾಡಿದ್ದಾರೆ.
ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಂತ ಕೆಟ್ಟ ಸಿಎಂ ಬೇಡ ಎಂದು ಜನ ಮೈಸೂರಿನಲ್ಲಿ ಮನೆಗೆ ಕಳುಹಿಸಿದ್ದಾರೆ. ಎಲ್ಲೇಲ್ಲೋ ನಿಂತು ಗೆಲ್ಲುವ ಪರಿಸ್ಥಿತಿ ಒಬ್ಬ ಮುಖ್ಯಮಂತ್ರಿಗೆ ಬಂದಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಅಧಿಕಾರ ಇಲ್ಲದಿದ್ದಾಗ ಬೆಂಕಿ ಹಾಕುವ ಕೆಲಸ, ಅಧಿಕಾರ ಇದ್ದಾಗ ಭ್ರಷ್ಟಾಚಾರ ಮಾಡುತ್ತದೆ, ಸಿದ್ದರಾಮಯ್ಯ ಮಾನ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಬೇಕು. ಸಿದ್ದರಾಮಯ್ಯಗೆ ಯೋಗ್ಯತೆ ಏನಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೇ ಮನೆಗೆ ಹೋಗಲಿಲ್ಲ. ನಮ್ಮ ರಾಜ್ಯದಲ್ಲಿ ವೀರಪ್ಪನ್ ನಂತಹ ಹತ್ತಾರು ಹಂತಕರನ್ನು ಕಂಡಿದ್ದೇವೆ. ಅದೇ ರೀತಿಯಲ್ಲಿ ಕಾಂಗ್ರೆಸ್ ನವರು ಆಡಳಿತ ನಡೆಸಿದವರು’ ಎಂದು ಕಟೀಲ್ ಕಿಡಿಕಾರಿದರು.
ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಮಾಜಿ ಸಿಎಂ ಆಗಿ ಗೌರವದಿಂದ ನಡೆದುಕೊಳ್ಳಬೇಕು. ಸಿದ್ದರಾಮಯ್ಯ ಸಿಎಂ ಇದ್ದಾಗ ಮೂರು ಸಾವಿರ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


