ಬೆಳಗಾವಿ ಉಪಚುನಾವಣೆಗೆ ಬಿಜೆಪಿ ತಾಲೀಮು: ಶಂಕರಗೌಡ ಪಾಟೀಲ್ ಗೆ ಟಿಕೆಟ್?
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮುಂದಿನ ಆರು ತಿಂಗಳ ಒಳಗೆ ಉಪ ಚುನಾವಣೆ ನಡೆಯಬೇಕಾಗಿದೆ, ಹೀಗಾಗಿ ಸುರೇಶ್ ಅಂಗಡಿ ಕುಟುಂಬಸ್ಥರು ಅಥವಾ ಪಕ್ಷದ ಬೇರೆ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚಿಸುತ್ತಿದೆ.

ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದ ಹಿನ್ನೆಲೆಯಲ್ಲಿ ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ.
ಮುಂದಿನ ಆರು ತಿಂಗಳ ಒಳಗೆ ಉಪ ಚುನಾವಣೆ ನಡೆಯಬೇಕಾಗಿದೆ, ಹೀಗಾಗಿ ಸುರೇಶ್ ಅಂಗಡಿ ಕುಟುಂಬಸ್ಥರು ಅಥವಾ ಪಕ್ಷದ ಬೇರೆ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚಿಸುತ್ತಿದೆ.
ಸುರೇಶ್ ಅಂಗಡಿಯ ರಕ್ತಸಂಬಂಧಿ ಹೊರತುಪಡಿಸಿ ಬೇರೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಎಂದು ಪಕ್ಷದ ಬಿಜೆಪಿ ಮುಖಂಡರು ತಿಳಿಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಳಗಾವಿ ರಾಜಕೀಯದ ಬಗ್ಗೆ ಚರ್ಚಿಸಲು ಸ್ಥಳೀಯ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಮುಖವಾಗಿ ಅಪಾರ ಪ್ರಮಾಣದಲ್ಲಿ ಮರಾಠಿ ಭಾಷಿಗರಿದ್ದಾರೆ. ಹೀಗಾಗಿ ಕನ್ನಡಿಗರು ಮತ್ತು ಮರಾಠಿಗರಲ್ಲಿ ಪ್ರಸಿದ್ಧವಾಗಿರುವ ನಾಯಕರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ. ಶಂಕರಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


