ರಾಜಕೀಯ

'ಬೆಂಗಳೂರು ಉಗ್ರರ ತಾಣ' ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು ಉಗ್ರರ ಕೇಂದ್ರವಾಗುತ್ತಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

'ಬೆಂಗಳೂರು ಉಗ್ರರ ತಾಣ' ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ: ಎಚ್.ಡಿ. ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಬೆಂಗಳೂರು ಉಗ್ರರ ಕೇಂದ್ರವಾಗುತ್ತಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 'ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ! ಎಂದು ಟೀಕಿಸಿದ್ದಾರೆ.

'ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು. ಬೆಂಗಳೂರು ಉಗ್ರರ ಕೇಂದ್ರವಾಗಿದೆ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು ಎಂದು ತಿಳಿಸಿದ್ದಾರೆ.

'ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ.  ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ! ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.