ರಾಜಕೀಯ

ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳ ಖುಲಾಸೆ ದುರದೃಷ್ಟಕರ: ಸಿದ್ದರಾಮಯ್ಯ

ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಪ್ರತಿಕ್ರಿಯಿಸಿದ್ದಾರೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳ ಖುಲಾಸೆ ದುರದೃಷ್ಟಕರ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :

ಬೆಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಪ್ರತಿಕ್ರಿಯಿಸಿದ್ದಾರೆ.

ನ್ಯಾಯಾಲಯ 2019ರ ಸುಪ್ರೀಮ್ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ. 'ಬಾಬರಿ ಮಸೀದಿ ಧ್ವಂಸ ನೆಲದ ಕಾನೂನಿಗೆ ವಿರುದ್ಧವಾದ ಕೃತ್ಯ' ಎಂದು 2019 ನವಂಬರ್ 9ರ ಸುಪ್ರೀಮ್ ಕೋರ್ಟ್ ತೀರ್ಪು ಹೇಳಿದೆ. ಈಗ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಮಾಡಿದವರು ಯಾರೆಂಬ ಪ್ರಶ್ನೆ ಹಾಗೆಯೇ ಉಳಿದಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಾಬರಿ ಮಸೀದಿ ಧ್ವಂಸ ಮಾಡಿದವರನ್ನು ಶಿಕ್ಷೆಗೊಳಪಡಿಸುವಂತೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.