ಸರ್ಕಾರ ಅನುಮತಿ ನೀಡದ ಹೊರತಾಗಿಯೂ ಡಿಕೆಶಿ ಪದಗ್ರಹಣ ಮಾಡಿಯೇ ತೀರುತ್ತೇವೆ: ಸಿದ್ದರಾಮಯ್ಯ
ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದು, ಗೃಹ ಸಚಿವ ಅಮಿತ್ ಶಾಗಿಲ್ಲದ ನಿಯಮಗಳನ್ನು ಡಿಕೆ ಶಿವಕುಮಾರ್ ಅವರ ಮೇಲೆ ಹೇರುತ್ತಿದೆ ಎಂದು ಕಿಡಿಕಾರಿದ್ದಾರೆ.
'ಕೆಪಿಸಿಸಿಯ ನೂತನ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸುತ್ತೇನೆ. ಇದು ರಾಜಕೀಯ ಪ್ರೇರಿತ ನಿರ್ಧಾರವಾಗಿದ್ದು, ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮಾತ್ರ ಅನ್ವಯ ಆಗುವುದು ಹೇಗೆ? ಸರ್ಕಾರ ಕೂಡಲೇ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಬೇಕು. ಬಿಜೆಪಿಯವರು ಎಂತಹಾ ದಮನಕಾರಿ ಪ್ರವೃತ್ತಿ ತೋರಿಸಿದರೂ ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರು, ಕಾನೂನಿನ ಅಡಿಯಲ್ಲೇ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


