ರಾಜಕೀಯದಲ್ಲಿ ಯಾರನ್ನು ನಂಬಲು ಆಗುತ್ತಿಲ್ಲ: ಡಿಕೆ ಶಿವಕುಮಾರ್
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮೂಲ ಕಾಂಗ್ರೆಸಿಗರು ದೂರು ನೀಡಿದ್ದಾರೆಂಬ ವಿಚಾರವನ್ನು ಅಲ್ಲಗಳೆದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾರು ಮೂಲ, ವಲಸಿಗರು ಎಂಬುದಿಲ್ಲ. ಇಲ್ಲಿ ಯಾವುದೇ ಬ್ರಾಂಡ್ ಇಲ್ಲ ಎಂದಿದ್ದಾರೆ.

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮೂಲ ಕಾಂಗ್ರೆಸಿಗರು ದೂರು ನೀಡಿದ್ದಾರೆಂಬ ವಿಚಾರವನ್ನು ಅಲ್ಲಗಳೆದಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾರು ಮೂಲ, ವಲಸಿಗರು ಎಂಬುದಿಲ್ಲ. ಇಲ್ಲಿ ಯಾವುದೇ ಬ್ರಾಂಡ್ ಇಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜಕೀಯದಲ್ಲಿ ಯಾರನ್ನು ನಂಬಲು ಆಗುತ್ತಿಲ್ಲ. ನಮ್ಮ ನೆರಳನ್ನು ನಾವೇ ನಂಬಲು ಸಾಧ್ಯವಾಗುತ್ತಿಲ್ಲ. 30 ವರ್ಷ 40ವರ್ಷ ಆದವರು ಬೇರೆ ಬೇರೆ ಪಕ್ಷಗಳಿಗೆ ವಲಸೆ ಹೋಗುತ್ತಿದ್ದಾರೆ. ಹೊಸಬರನ್ನು ಬೇಳೆಸುತ್ತಾರೆ. ಹಳಬರು ಪಕ್ಷದಲ್ಲೇ ಕುಳಿತಿದ್ದಾರೆ. ಹೀಗಾಗಿ ಮುಂದೆ ಏನಾಗಲಿದೆ ಎಂಬುದು ಗೊತ್ತಾಗಲಿದೆ ಎಂದು ಮಾರ್ಮಿಕವಾಗಿ ನುಡಿದರು.
'ಮೈಸೂರು ರಾಜಕೀಯ ನಾಯಕರನ್ನೇ ನೋಡಿ, ಹಿಂದೆ ಅವರು ಹೇಗೆ ಮಾತನಾಡುತ್ತಿದ್ದರು, ಈಗ ಹೇಗೆ ಮಾತನಾಡುತ್ತಿದ್ದಾರೆ ಗಮನಿಸಿ' ಎಂದು ಜಿ.ಟಿ.ದೇವೇಗೌಡ, ಎಚ್.ವಿಶ್ವನಾಥ್ ಹೆಸರು ಹೇಳದೆ ಡಿ.ಕೆ.ಶಿವಕುಮಾರ್ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರ ಸಂಸ್ಕೃತಿ ಎಲ್ಲರಿಗೂ ಗೊತ್ತಿದೆ. ಅವರು ಓದಿದ ಪುಸ್ತಕದ ಸಂಸ್ಕೃತಿಯಿಂದ ಇದೆಲ್ಲಾ ಆಗಿದೆ. ಇಂತವರನ್ನು ಬದಲಾಯಿಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


