ರಸಗೊಬ್ಬರದ ಬೆಲೆ ಶೇ. 60 ರಷ್ಟು ಏರಿಕೆ ಗಾಯದ ಮೇಲೆ ಬರೆ ಎಳೆದಂತೆ: ಸಿದ್ದರಾಮಯ್ಯ
ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು: ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ, ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ರಸಗೊಬ್ಬರ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೇಂದ್ರದ ರೈತ ಶತೃ ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2,400 ರೂಪಾಯಿಗಳಿದ್ದ ಬೆಲೆ ಈಗ 3,800 ರೂ ಗಳಾಗುತ್ತಿದೆ. ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600 ರಷ್ಟಾಗಿದ್ದು, ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ ಎಂದಿದ್ದಾರೆ.
ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ. ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಬಿಜೆಪಿ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ ಮಾಡಲಿದೆ ಎಂದು ಮಾಜಿ ಸಿಎಂ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


