ನೈಟ್ ಕರ್ಫ್ಯೂ ನಿಂದ ಯಾವುದೇ ಪ್ರಯೋಜನ ಇಲ್ಲ: ಡಿ.ಕೆ.ಶಿವಕುಮಾರ್
ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಠಿಣ ನಿರ್ಬಂಧ ಘೋಷಿಸಿದ್ದಾರೆ. ಇಂದಿನಿಂದ ಏ. 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಠಿಣ ನಿರ್ಬಂಧ ಘೋಷಿಸಿದ್ದಾರೆ. ಇಂದಿನಿಂದ ಏ. 20 ರವರೆಗೆ 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ನೈಟ್ ಕರ್ಫ್ಯೂಯಿಂದ ಯಾವುದೇ ಪ್ರಯೋಜನ ಇಲ್ಲ. ಜನರಿಗೆ ತೊಂದರೆ ನೀಡಿ, ಆರ್ಥಿಕ ಪರಿಸ್ಥಿತಿ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರ ನಡೆಸಲು ಆಗದವರು ಅಧಿಕಾರಕ್ಕೆ ಬಂದರೆ ಹೀಗೇ ಆಗುವುದು. ಕೈ ಮೀರಿದ ಮೇಲೆ ಈಗ ಸರ್ವ ಪಕ್ಷಗಳನ್ನು ಕರೆದು ಮೀಟಿಂಗ್ ಮಾಡುತ್ತೇನೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳುತ್ತಿದ್ದಾರೆ. ಏನೆಲ್ಲ ಮಾಡಬಾರದಿತ್ತು ಅದನ್ನೆಲ್ಲ ಮಾಡಿ ಈಗ ಸರ್ವಪಕ್ಷಗಳ ಸಭೆಯ ಅಗತ್ಯತೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ದೇಶ ಮತ್ತು ರಾಜ್ಯದಲ್ಲಿ ಅನ್ಯಾಯ ಮಾಡಿದ್ದಾರೆ. ದೀಪ ಹಚ್ಚಿ, ಜಾಗಟೆ ಬಾರಿಸಿದರೂ ಏನೂ ಬದಲಾಗಿಲ್ಲ. ಕೊರೋನಾ ಸಾಂಕ್ರಾಮಿಕದ ಅವಧಿಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆದಿದೆ. ನೇಕಾರರು ಸೇರಿದಂತೆ ಕೂಲಿ ಕಾರ್ಮಿಕರಿಗೆ ಸರಕಾರದ ಸಹಾಯ ಧನ ಮುಟ್ಟಿಲ್ಲ. ಕೊರೋನಾ ಸಂದರ್ಭದಲ್ಲಿ ರೂ.16,000 ಕೋಟಿಯನ್ನು ಯಾವ ರೀತಿ ಖರ್ಚು ಮಾಡಿದೆ, ಎಲ್ಲೆಲ್ಲಿ ರೂ.20 ಲಕ್ಷ ಕೋಟಿ ಖರ್ಚು ಮಾಡಿದೆ ಎಂಬೆಲ್ಲಾ ಲೆಕ್ಕವನ್ನೂ ಸಾರ್ವಜನಿಕರ ಮುಂದಿಡಲಿ ಎಂದು ರಾಜ್ಯ ಸರಕಾರಕ್ಕೆ ಅವರು ಸವಾಲು ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


