ರಾಜಕೀಯ

ಕಾಂಗ್ರೆಸ್ ಅಲ್ಲ, ಸಿಎಂ ಯಡಿಯೂರಪ್ಪ ಹಡಗು ಮುಳುಗುತ್ತಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದು, ಮುಳುಗುತ್ತಿರುವ ಹಡಗು ಕಾಂಗ್ರೆಸ್'ನದಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಡಗು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಲ್ಲ, ಸಿಎಂ ಯಡಿಯೂರಪ್ಪ ಹಡಗು ಮುಳುಗುತ್ತಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
Published On :

ಬೆಳಗಾವಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದು, ಮುಳುಗುತ್ತಿರುವ ಹಡಗು ಕಾಂಗ್ರೆಸ್'ನದಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಡಗು ಎಂದು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿಗಳ ಹಡಗು ಮುಳುಗುತ್ತಿದೆ ಎನ್ನುವುದಕ್ಕೆ ಯತ್ನಾಳ್ ಹೇಳಿಕೆಗಳೇ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. 

ಅಭ್ಯರ್ಥಿ ಮಾಡುವ ಮೂಲಕ ಸತೀಶ್ ಜಾರಕಿಹೊಳಿಯವರನ್ನು ಹರಕೆಯ ಕುರಿ ಮಾಡಲಾಗಿದೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಮಂಗಳ ಅಂಗಡಿಯವರಿಗೆ ಏನು ಮಾಡಿದರು? ಮೊದಲು ಯಾರ ಹೆಸರು ಕೇಳಿಬರುತ್ತಿತ್ತು, ನಂತರ ಏನಾಯ್ತು? ಎಲ್ಲಾ ಗೊತ್ತು. ರವಿ ಯಾವಾಗಲೂ ಸುಳ್ಳನ್ನೇ ಹೇಳುತ್ತಾನೆ. ಅವರ ಹೇಳಿಕೆಗೆ ಉತ್ತರ ಕೊಡುವುದಿಲ್ಲ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು. 

ಉಪಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರನ್ನು ಗೆಲ್ಲಿಸುವ ಮೂಲಕ ಬಿಜೆಪಿ ಪಾಠ ಕಲಿಸಬೇಕೆಂದು ಇದೇ ವೇಳೆ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.