ಸತೀಶ್ ಜಾರಕಿಹೊಳಿ ರಾಜಕೀಯ ಜೀವನ ಅಂತ್ಯಗೊಳಿಸಲು ಡಿಕೆ ಶಿವಕುಮಾರ್ ಪಿತೂರಿ: ಕಟೀಲ್
ತಮ್ಮ ರಾಜಕೀಯ ಮಹಾತ್ವಾಕಾಂಕ್ಷೆಗಳಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಪ್ರಾಬಲ್ಯ ಹೊಂದಿರುವ ಸತೀಶ್ ಜಾರಕಿಹೊಳಿ ಅವರ ರಾಜಕೀಯ ಜೀವನವನ್ನು ನಾಶ ಮಾಡಲು ಸಂಚು ನಡೆಸಿದ್ದಾರೆ.

ಬೆಳಗಾವಿ: ತಮ್ಮ ರಾಜಕೀಯ ಮಹಾತ್ವಾಕಾಂಕ್ಷೆಗಳಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಪ್ರಾಬಲ್ಯ ಹೊಂದಿರುವ ಸತೀಶ್ ಜಾರಕಿಹೊಳಿ ಅವರ ರಾಜಕೀಯ ಜೀವನವನ್ನು ನಾಶ ಮಾಡಲು ಸಂಚು ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಮೂರು ಬಣಗಳಾಗಿ ವಿಭಜನೆಯಾಗಿದ್ದು ತಳ ಕಚ್ಚಿದೆ ಎಂದು ಟೀಕಿಸಿದ್ದಾರೆ.
ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ವಹಿತಾಸಕ್ತಿಗಾಗಿ ಪಕ್ಷವನ್ನು ಅಳಿವಿನ ಅಂಚಿಗೆ ತಂದಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸದ್ಯ ಮುಳುಗುತ್ತಿರುವ ಹಡಗಿನಂತಾಗಿದೆ, ಇದೇ ವೇಳೆ ಪ್ರಧಾನಿ ನರೇಂದದ್ರ ಮೋದಿ ಅವರ ಜನಪ್ರಿಯತೆಯಿಂದಾಗಿ ದೇಶಾದ್ಯಂತ ಬಿಜೆಪಿ ಹೆಚ್ಚು ಪ್ರಾಬಲ್ಯವಾಗುತ್ತಿದೆ ಎಂದು ಹೇಳಿದ್ದಾರೆ.
ಮೋದಿ ಆಳ್ವಿಕೆಯಿಂದಾಗಿ ಪ್ರಪಂಚವೇ ಭಾರತವನ್ನು ತಿರುಗಿ ನೋಡುವಂತಾಗಿದೆ ಎಂದು ತಿಳಿಸಿದ್ದಾರೆ.
ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲುವಿನತ್ತ ಮತ ಚಲಾಯಿಸುವ ಮೂಲಕ ಬೆಳಗಾವಿಯ ಜನರು ಮೋದಿಯಲ್ಲಿ ಹೆಚ್ಚಿನ ಶಕ್ತಿಯನ್ನು ತುಂಬಬೇಕು ಎಂದು ಮನವಿ ಮಾಡಿದ್ದಾರೆ.
ಕೇಂದ್ರ ರೈಲ್ವೆ ಮಾಜಿ ರಾಜ್ಯ ಸಚಿವ ಸುರೇಶ್ ಅಂಗಡಿಯವರ ಹಠಾತ್ ನಿಧನವು ನಮ್ಮನ್ನು ಆಘಾತಕ್ಕೊಳಗಾಗಿಸಿದೆ ಎಂದು ಹೇಳಿದ ಕಟೀಲ್, ಸರಳ ಮತ್ತು ಸಮರ್ಥ ನಾಯಕನಾಗಿದ್ದು, ಕರ್ನಾಟಕದ ರೈಲು ಕ್ಷೇತ್ರದ ಅಭಿವೃದ್ಧಿಗೆ ಸಚಿವರಾಗಿ ಸಾಕಷ್ಟು ಹಣವನ್ನು ಅಂಗಡಿ ತಂದಿದ್ದರು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


