ಮಸ್ಕಿ ಉಪಚುನಾವಣೆ: ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರ ಬಂಧನ
ಮಸ್ಕಿ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರು ಹಾಗೂ ಹಣ ಪಡೆದ ಓರ್ವ ಮಹಿಳೆಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ರಾಯಚೂರು: ಮಸ್ಕಿ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರು ಹಾಗೂ ಹಣ ಪಡೆದ ಓರ್ವ ಮಹಿಳೆಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಹರ್ವಾಪುರದಲ್ಲಿ ಹಣ ಹಂಚಿಕೆ ಮಾಡಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗದ ಅಧಿಕಾರಿಗಳು ಹಾಗೂ ಪೊಲೀಸರು ದೂರಿನ ಆಧಾರದ ಮೇಲೆ ಹೊಳೆನರಸೀಪುರದಲ್ಲಿ ಅಮಿತ್ ಎಂಬ ವ್ಯಕ್ತಿಯೊಬ್ಬನನ್ನು ಬಂಧನಕ್ಕೊಳಪಡಿಸಿದ್ದಾರೆ.
ದುರ್ಗಾ ಕ್ಯಾಂಪ್ ನಲ್ಲಿ ಹಣ ಹಂಚಿಕೆ ಮಾಡುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಟ್ಟಿಬಾಬು ಎಂಬ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಈ ನಡುವೆ ಹಣ ಹಂಚಿಕೆ ಮಾಡಿದ್ದ ಹೇಮಂತ್ ಎಂಬ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹಣವನ್ನು ಪಡೆದಿದ್ದ ತಾಯಮ್ಮ ಎಂಬ ಮಹಿಳೆಯನ್ನು ಬಂಧನಕ್ಕೊಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


