'ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ!?'
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ ಎಂದು ಭಾರತೀಯ ಬಿಜೆಪಿ ಪ್ರಶ್ನಿಸಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ ಎಂದು ಬಿಜೆಪಿ ಪ್ರಶ್ನಿಸಿದೆ.
ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೋಟ್ಯಂತರ ಬೆಲೆಯ ಆಸ್ತಿ ಸಂಗ್ರಹಿಸಿದ್ದು ಹೇಗೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಶ್ನಿಸಿದ ಬೆನ್ನಲ್ಲೇ ಬಿಜೆಪಿ ಸರಣಿ ಟ್ವಿಟ್ ಮೂಲಕ ತಿರುಗೇಟು ನೀಡಿದೆ.
ಕಾಂಗ್ರೆಸ್ ಪಕ್ಷಕ್ಕೆ ಕಾಮಾಲೆ ರೋಗ ಬಾಧಿಸುತ್ತಿದೆ. ರಾಬರ್ಟ್ ವಾದ್ರಾ, ಸೋನಿಯಾ ಗಾಂಧಿ, ಚಿದಂಬರಂ, ಡಿ.ಕೆ.ಶಿ, ಖರ್ಗೆ ಅವರ ಖಜಾನೆ ತುಂಬಿದ್ದು ಹೇಗೆ ಎಂದು ಪ್ರಶ್ನಿಸುವ ಧೈರ್ಯವನ್ನು ಕಾಂಗ್ರೆಸ್ ತೋರಬೇಕು. ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ!? ಎಂದು ಪ್ರಶ್ನಿಸಿದೆ.
ಕನಕಪುರದಲ್ಲಿ ಕಳ್ಳ ವಹಿವಾಟು ನಡೆಸುತ್ತಿದ್ದ ಭ್ರಷ್ಟಾಚಾರ ಆರೋಪಿಯ ಘೋಷಿತ ಆಸ್ತಿಯೇ 840 ಕೋಟಿ. 2013ರಿಂದ 2018ರ ಅವಧಿಯಲ್ಲಿ ತನ್ನ ಆಸ್ತಿ 600 ಕೋಟಿ ವೃದ್ಧಿಸಿದೆ ಎಂದು ಮಹಾನಾಯಕ ಹೇಳಿಕೊಂಡಿದ್ದರು. ಇಂಧನದಲ್ಲಿ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ ಎಂದು ಕನಕಪುರದ ಮಹಾನಾಯಕನ ಪ್ರಶ್ನಿಸಿ ಎಂದು ಕಾಂಗ್ರೆಸ್‌ಗೆ ಹೇಳಿದೆ.
ಕನಕಪುರದಲ್ಲಿ ಕಳ್ಳ ವಹಿವಾಟು ನಡೆಸುತ್ತಿದ್ದ ಭ್ರಷ್ಟಾಚಾರ ಆರೋಪಿಯ ಘೋಷಿತ ಆಸ್ತಿಯೇ 840 ಕೋಟಿ. 2013 ರಿಂದ 2018 ರ ಅವಧಿಯಲ್ಲಿ ತನ್ನ ಆಸ್ತಿ 600 ಕೋಟಿ ವೃದ್ಧಿಸಿದೆ ಎಂದು ಮಹಾನಾಯಕ ಹೇಳಿಕೊಂಡಿದ್ದರು.
ಮಜವಾದಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 600 ಕೋಟಿ ಸಂಪತ್ತು ಹೆಚ್ಚಾಗಿದೆ ಎಂದು ಡಿ.ಕೆ. ಶಿವಕುಮಾರ್ ಘೋಷಿಸಿಕೊಂಡಿದ್ದರು. ಹಾಗಾದರೆ ಉಳಿದ ಕುಖ್ಯಾತರಾದ ಜಾರ್ಜ್, ಮಹಾದೇವಪ್ಪ, ಎಂ.ಬಿ.ಪಾಟೀಲ್ ಮೊದಲಾದವರ ಲೂಟಿ ಎಷ್ಟು? ಎಂಎಲ್‌ಸಿ ಗೋವಿಂದರಾಜ್ ಐಟಿ ಡೈರಿಯನ್ನು ಒಮ್ಮೆ ಬಿಚ್ಚಿಸಿಡುವಿರಾ ಕಾಂಗ್ರೆಸ್? ಎಂದು ಸವಾಲು ಹಾಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


