ರಾಜಕೀಯ

ಮಂಗಳಾ ಅಂಗಡಿ 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ: ಬಿಎಸ್'ವೈ ವಿಶ್ವಾಸ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳಾ ಅಂಗಡಿ 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ: ಬಿಎಸ್'ವೈ ವಿಶ್ವಾಸ
ಮಂಗಳಾ ಅಂಗಡಿ
Published On :

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಬುಧವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಭರ್ಜರಿ ಪ್ರಚಾರ ನಡೆಸಿದರು. ದಿನವಿಡೀ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿದ ಅವರು, ಗೋಕಾಕ್ ನಲ್ಲಿ ಬೃಹತ್ ಶೋ ನಡೆಸಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿ ಮಂಗಳಾ ಅಂಗಡಿ ಅವರು ನಾಲ್ಕು ಲಕ್ಷ ಮತಗಳ ಅಂತದಿಂದ ಭರ್ಜರಿ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಈಗಾಗಲೇ ಕ್ಷೇತ್ರದಲ್ಲಿ ಬಿಜೆಪಿ ಪರ ಉತ್ತಮ ವಾತಾವರಣ ಇದೆ. ಬೆಳಗಾವಿ ಲೋಕಸಭೆಗೆ ಮೊದಲ ಬಾರಿ ಮಹಿಳೆಯೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ನೀಡಿದ್ದೇವೆ. ಗೋಕಾಕ ಮತ್ತು ಅರಭಾವಿಯಲ್ಲೂ ಪಕ್ಷದ ಪರ ಉತ್ತಮ ವಾತಾವರಣ ಇದೆ. ರಮೇಶ್ ಜಾರಕಿಹೊಳಿ ಸಹೋದರರು ಕೂಡ ಸ್ಪಂದಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಪ್ರಚಾರ ನಡೆಸುತ್ತಿದ್ದಾರೆಂದು ತಿಳಿಸಿದರು.

ಕಾಂಗ್ರೆಸ್ ಮುಳುಗುವ ಹಡಗು. ಆದರೆ, ನಾವು ಶಕ್ತಿ ಮೀರಿ ರಾಜ್ಯ ಅಭಿವೃದ್ಧಿ ಮಾಡುತ್ತಿದ್ದೇವೆ. ಬೆಳಗಾವಿಯನ್ನು ಮಾದರಿ ಜಿಲ್ಲೆಯಾಗಿಸಲು ಎಲ್ಲಾ ಕ್ರಮ ಕೈಗೊಳ್ಳುತ್ತೇವೆ. ಬಾಲಚಂದ್ರ ಜಾರಕಿಹೊಳಿ ಅವರು ಪ್ರಚಾರಕ್ಕೆ ಬಂದದ್ದು ನಮಗೆ ಆನೆ ಬಲಬಂದಂತಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.