'ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?'
ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

ಬೆಂಗಳೂರು: ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ಸಂಸದ ಡಿಕೆ ಸುರೇಶ್ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಪ್ರಶ್ನಿಸಿದೆ.
ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಗೆದ್ದು ಸಂಸದರಾದರೆ ಬಿಜೆಪಿ ಸಂಸದರಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಂದೆ ತಲೆಭಾಗಿ ಬೇಡುವುದಿಲ್ಲ ಎಂದು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸುರ್ಜೇವಾಲ ಹೇಳಿಕೆ ನೀಡಿದ್ದರು.
ಇದಕ್ಕೆ ಟ್ವಿಟ್ಟರ್‌ನಲ್ಲಿ ಟಾಂಗ್ ನೀಡಿರುವ ಬಿಜೆಪಿ, ನಿಮ್ಮ ಮಾತಿನ ಪ್ರಕಾರ ಕನಕಪುರದ ಮಹಾನಾಯಕನ ಸಹೋದರ ಡಿಕೆ ಸುರೇಶ್ ಅಸಮರ್ಥರೇ!? ಡಿಕೆ ಸುರೇಶ್ ಅವರ ಸಾಮರ್ಥ್ಯದ ಮೇಲೆ ನಿಮಗೆ ಅನುಮಾನ ಬರಲು ಕಾರಣವೇನು? ಎಂದು ಲೇವಡಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


