ಝಣ ಝಣ ಕಾಂಚಾಣ, ಭ್ರಷ್ಟಾಚಾರವೇ ಬಿಜೆಪಿ ಲಾಂಛನ: ಕಾಂಗ್ರೆಸ್
ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

ಬೆಂಗಳೂರು: ಶನಿವಾರ ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ ಮತಗಳ ಖರೀದಿಗಾಗಿ ಹಣ ಚೆಲ್ಲಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.
ಈ ಸಂಬಂಧ ವಿಡಿಯೋಗಳನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ರಾಜಾರೋಷವಾಗಿ ಇಷ್ಟೆಲ್ಲಾ ಅಕ್ರಮಗಳು ನಡೆದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿರುವುದನ್ನು ನೋಡಿದ ಜನತೆಗೆ ಅಕ್ರಮದಲ್ಲಿ ಆಯೋಗವೂ ಶಾಮಿಲಾಗಿದೆಯೇ ಎಂಬ ಅನುಮಾನ ಮೂಡುವುದು ಸಹಜ ಎಂದಿದೆ.
ಹಣ ಹಂಚುವ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಬಿಜೆಪಿ ಕಾರ್ಯಕರ್ತನ ಪರವಾಗಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ಬಿಡಿಸಿಕೊಂಡು ಹೋಗಲು ಬರುತ್ತಾರೆ. ಹಣ ಹಂಚಿಕೆಯಲ್ಲಿ ಸ್ವತಃ ಅಭ್ಯರ್ಥಿಯ ಕೈವಾಡವಿರುವುದು ಸ್ಪಷ್ಟವಾಗಿದೆ. ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಬಿಜೆಪಿ ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಿ ಎಂದು ಒತ್ತಾಯಿಸಿದೆ.
ಸಾಧನೆ ಹೇಳಿ ಮತ ಕೇಳಲಾಗದ ಬಿಜೆಪಿ ಪಕ್ಷ ಹಣ ಹಂಚಿಕೆಯ ಅಕ್ರಮಕ್ಕೆ ಇಳಿದಿದೆ.ವಿಜಯೇಂದ್ರ ಸರ್ವೀಸ್ ಟ್ಯಾಕ್ಸ್ ನಲ್ಲಿ ಲೂಟಿ ಹೊಡೆದ ಹಣ ಮತ ಖರೀದಿಸಲು ಬಳಸುವುದನ್ನೇ ಸಾಧನೆ ಎಂದು ತಿಳಿದಿದೆ. ಬಿವೈ ವಿಜಯೇಂದ್ರ ಅವರೇ ಇದೇ ಅಕ್ರಮಗಳಿಗೆ ತಾವು ಕಾಂಗ್ರೆಸ್ ಹೆದರಿದೆ ಅಂದಿದ್ದು? ನಿಮ್ಮ ಹಣದ ಆಟ ನಾಡಿನ ಜನತೆಯ ಮುಂದೆ ನಡೆಯದು ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


