'ಪ್ರಚಾರದ ತೆವಲಿಗೆ ಭಾರತೀಯರ ಹಿತ ಬಲಿಯಾಗುತ್ತಿರುವುದು ಮೊದಲಲ್ಲ: ಕಾಂಗ್ರೆಸ್ ಹಿಂದೆಯೂ ದೇಶದ ಪರವಾಗಿ ನಿಂತಿಲ್ಲ'
ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ತೆವಲಿಗೆ ಭಾರತೀಯರ ಹಿತ ಬಲಿಯಾಗುತ್ತಿರುವುದು ಇದೇ ಮೊದಲಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಪ್ರದೇಶ ಸಮಿತಿ ಆರೋಪಿಸಿದೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಚಾರದ ತೆವಲಿಗೆ ಭಾರತೀಯರ ಹಿತ ಬಲಿಯಾಗುತ್ತಿರುವುದು ಇದೇ ಮೊದಲಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಪ್ರದೇಶ ಸಮಿತಿ ಆರೋಪಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಉತ್ಪಾದಿಸಿದ ಲಸಿಕೆಗಳನ್ನು ವಿದೇಶಗಳಿಗೆ ಹಂಚಿದ್ದಾರೆ, ಪರಿಣಾಮ ದೇಶಾದ್ಯಂತ ಲಸಿಕೆ ಕೊರತೆ ಎದುರಾಗಿದೆ. ಇಷ್ಟಾದರೂ ರಫ್ತು ನಿಷೇಧ ಹೇರಲಿಲ್ಲ ಎಂದು ಹೇಳಿದೆ, ದೇಶಕ್ಕೆಸಗಿದ ಇಂತಹ ದ್ರೋಹವನ್ನು ಬಿಜೆಪಿ ಲಜ್ಜೆ ಬಿಟ್ಟು ಸುಳ್ಳುಗಳ ಮೂಲಕ ಸಮರ್ಥನೆಗೆ ಇಳಿದಿದೆ ಎಂದು ಕಿಡಿಕಾರಿದೆ,
ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಉಂಟಾಗಿದೆ ಎಂಬುವುದು ಸುಳ್ಳು ಹಾಗೂ ವದಂತಿಯಾಗಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ, ಸುಳ್ಳುಗಳ ಮೂಲಕ ದೇಶದ ಜನತೆಗೆ ತಪ್ಪು ಮಾಹಿತಿ ತಲುಪಿಸುತ್ತಿರುವ ವಿಪಕ್ಷಗಳ ಷಡ್ಯಂತ್ರಕ್ಕೆ ಬಲಿಯಾಗದಿರೋಣ. ಕಾಂಗ್ರೆಸ್ ಹಿಂದೆಯೂ ದೇಶದ ಪರವಾಗಿ ನಿಂತಿಲ್ಲ, ಮುಂದೆಯೂ ನಿಲ್ಲುವುದಿಲ್ಲ ಎಂದು ತಿರುಗೇಟು ನೀಡಿದೆ.
ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಉಂಟಾಗಿದೆ ಎಂಬ ವದಂತಿ ಸುಳ್ಳು ಮಾಹಿತಿಯಾಗಿದ್ದು, ಇದನ್ನು ನಂಬದಿರೋಣ ಎಂದು ಟ್ವೀಟ್ ನಲ್ಲಿ ಹೇಳಿದೆ. ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಎದುರಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕ ಈ ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


