ಅಂತ್ಯಸಂಸ್ಕಾರವನ್ನಾದ್ರೂ ಗೌರವಯುತವಾಗಿ ನಡೆಸಿ: ಸರ್ಕಾರಕ್ಕೆ ಹೆಚ್‍ಡಿಕೆ ಮನವಿ
ವೆಂಟಿಲೇಟರ್ ಸೇರಿದಂತೆ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರ್ಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ವೆಂಟಿಲೇಟರ್ ಸೇರಿದಂತೆ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರ್ಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಚಿಕಿತ್ಸೆ ದಕ್ಕದೆ ಅತ್ಯಂತ ಅಮಾನವೀಯವಾಗಿ ಸಾವನ್ನಪ್ಪಿದ ಕೊರೊನಾ ಸೋಂಕಿತರ ಶವಗಳ ಗೌರವಯುತ ಅಂತ್ಯ ಸಂಸ್ಕಾರಕ್ಕೆ ಕನಿಷ್ಠ ವ್ಯವಸ್ಥೆಯನ್ನು ಮಾಡುವಲ್ಲಿ ಕೈ ಚೆಲ್ಲಿ ಕುಳಿತಿರುವ ರಾಜ್ಯ ಸರ್ಕಾರದ ವೈಫಲ್ಯ ಅತ್ಯಂತ ಬೇಜವ್ದಾರಿತನದ ನಿರ್ದಯಿ ವರ್ತನೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನ ಎಂಟೂ ದಿಕ್ಕುಗಳಲ್ಲೂ ಮರಗಳಿಲ್ಲದ ಬೆಂಗಾಡು ಅರಣ್ಯ ಭೂಮಿಯಿದೆ.ಇಲ್ಲಿ ಪ್ರತಿದಿನ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತಿಮ ಸಂಸ್ಕಾರಕ್ಕೆ ಕೂಡಲೇ ವ್ಯವಸ್ಥೆ ಮಾಡಬೇಕು. ಸರಕಾರ ಇದನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊರೊನಾ ಸೋಂಕಿತರಿಗೆ ಬೆಡ್ ಗಳನ್ನು, ಆಕ್ಸಿಜನ್, ವೆಂಟಿಲೇಟರ್, ಹಾಗೂ ಲಭ್ಯವಿರುವ ಉಪಶಮನದ ಔಷಧಿಗಳನ್ನು ಸರಕಾರ ಕೊಡಲಿಲ್ಲ. ಕನಿಷ್ಟ ಅವರ ಅಂತ್ಯ ಸಂಸ್ಕಾರವನ್ನಾದರೂ ಗೌರವಯುತವಾಗಿ ನಡೆಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಅತ್ಯಂತ ನೋವಿನಿಂದ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ವ್ಯವಸ್ಥೆ ಮಾಡುವಲ್ಲಿ ಮುಗ್ಗರಿಸಿ ಬಿದ್ದ ಸರಕಾರ ಅಂತ್ಯಸಂಸ್ಕಾರಕ್ಕಾದರೂ ಜಾಗದ ವ್ಯವಸ್ಥೆ ಮಾಡುವಲ್ಲಿ ಇನ್ನೂ ತಡಮಾಡದೆ ಕೈ ಕಟ್ಟಿ ಕೂರಬಾರದು. ಇಲ್ಲದಿದ್ದರೆ, ಜನರ ಹಿಡಿಶಾಪ ಸರಕಾರಕ್ಕೆ ತಗಲುವುದರಲ್ಲಿ ಸಂಶಯವೇ ಬೇಡ. ಸಾವನ್ನಪ್ಪಿದ ಕೊರೊನಾ ಸೋಂಕಿತರ ಬಂಧು ಬಳಗದವರು ಪಡುತ್ತಿರುವ ಬವಣೆಯನ್ನು ಕಂಡರೆ, ಹೃದಯ ಕಿವುಚಿದಂತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


