ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ: ಹೆಚ್.ಡಿ.ಕುಮಾರಸ್ವಾಮಿ
ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರ ಜಿಂದಾಲ್ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್ ಕಂ ಸೇಲ್ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಹೇಳಿದ್ದಾರೆ.
ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ'. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.
ಆಗ ಕಾಂಗ್ರೆಸ್ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್ ಸಿಂಗ್ ಜಿಂದಾಲ್ ಅನ್ನು'ಈಸ್ಟ್ ಇಂಡಿಯಾ ಕಂಪನಿ' ಎಂದಿದ್ದರು. ಜಿಂದಾಲ್ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್ ಸಿಂಗ್ ಈಗ ಈಸ್ಟ್ ಇಂಡಿಯಾ ಕಂಪನಿ ಪರವಾಗಿದ್ದಾರಾ?. ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್.ಕೆ ಪಾಟೀಲ್ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ? ಎಂದು ದೂರಿದ್ದಾರೆ.
ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ 'ಗೊತ್ತಿಲ್ಲ' ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ ಎಂದಿರುವ ಅವರು, ಲೀಸ್ ಕಂ ಸೇಲ್ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


