ಪಕ್ಷದ ಬಲವರ್ಧನೆಗೆ ಹಿರಿಯ ನಾಯಕರ ನಿಯೋಜನೆಗೆ ಬಿಜೆಪಿ ಚಿಂತನೆ?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟಕ್ಕೆ ಹೊಸ ನಾಯಕರನ್ನು ಸಚಿವರನ್ನಾಗಿ ನೇಮಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ನಡುವಲ್ಲೇ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದವರನ್ನು ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ನಿಯೋಜನೆಗೊಳಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟಕ್ಕೆ ಹೊಸ ನಾಯಕರನ್ನು ಸಚಿವರನ್ನಾಗಿ ನೇಮಿಸಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ನಡುವಲ್ಲೇ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದವರನ್ನು ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ನಿಯೋಜನೆಗೊಳಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಪಕ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡವರಿಗೆ ಸಚಿವ ಸ್ಥಾನ ನೀಡಲು ಹಾಗೂ ಅನುಭವವುಳ್ಳ ಹಿರಿಯ ನಾಯಕರಿಗೆ ಪಕ್ಷದ ಬಲ ಹೆಚ್ಚಿಸುವ ಜವಾಬ್ದಾರಿ ನೀಡಲು ವರಿಷ್ಠರು ಚಿಂತನೆ ನಡೆಸುತ್ತಿದ್ದಾರೆಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ.
ಈ ಎಲ್ಲಾ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಮಾಜಿ ಗ್ರಾಮೀಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯದಲ್ಲಿ ಪಕ್ಷದ ಬಲವನ್ನು ಹೆಚ್ಚಿಸುವುದರತ್ತ ಗಮನಹರಿಸುತ್ತಿದ್ದಾರೆಂದು ಹೇಳಲಾಗುತ್ತಿದೆ.
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಈಶ್ವರಪ್ಪ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ದುರಂತವೆಂದರೆ ಪೂರ್ಣ ಬಹುಮತ ಸಿಕ್ಕಿಲ್ಲ. ಇದರಿಂದ ಪಕ್ಷದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿವೆ. ಆಡಳಿತ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ರಾಜ್ಯದಲ್ಲಿ ಬಹುಮತದ ಮೂಲಕ ಪಕ್ಷ ಅಧಿಕಾರಕ್ಕೆ ಬಂದರೆ, ಅದು ಆಡಳಿತಕ್ಕೆ ಸುಲಭವಾಗುತ್ತದೆ. ಹೀಗಾಗಿಯೇ ದೆಹಲಿಯಲ್ಲಿರುವ ಪಕ್ಷದ ವರಿಷ್ಠರು ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಹೆಚ್ಚಿನ ಗಮನಹರಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಮಗೆ ಬಹುಮತ ಸಿಗುವ ವಿಶ್ವಾಸವಿದೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಾವು ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


