ಬೊಮ್ಮಾಯಿ ಸಂಪುಟ: ಬೆಂಗಳೂರಿನ 7 ಶಾಸಕರಿಗೆ ಒಲಿದ ಅದೃಷ್ಟ…!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಬೆಂಗಳೂರಿಗೆ ಹೆಚ್ಚಿನ ಪ್ರಾತಿನಿಧ್ಯ ಕೊಡಲಾಗಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಬೆಂಗಳೂರಿಗೆ ಹೆಚ್ಚಿನ ಪ್ರಾತಿನಿಧ್ಯ ಕೊಡಲಾಗಿದೆ.
ಬೆಂಗಳೂರು ನಗರ ಪ್ರತಿನಿಧಿಸುವ ಏಳು ಶಾಸಕರು ಸಚಿವರಾಗುತ್ತಿದ್ದಾರೆ. ಬೆಂಗಳೂರು ನಗರದಿಂದ ಸಚಿವರಾಗಿದ್ದ ಅರವಿಂದ ಲಿಂಬಾವಳಿ, ಎಸ್. ಸುರೇಶ್ ಕುಮಾರ್ ಅವರು ಈ ಬಾರಿ ಸಂಪುಟದಲ್ಲಿ ಸ್ಥಾನ ಪಡೆದಿಲ್ಲ ಎಂಬುದು ಮಹತ್ವದ ಸಂಗತಿ. ಆದರೆ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನಗೆ ಮಣೆ ಹಾಕಲಾಗಿದೆ.
ಉಳಿದಂತೆ ಬೆಂಗಳೂರು ನಗರದ ಶಾಸಕರಾದ ಆರ್. ಅಶೋಕ, ವಿ. ಸೋಮಣ್ಣ, ಕೆ. ಗೋಪಾಲಯ್ಯ, ಬೈರತಿ ಬಸವರಾಜ, ಡಾ. ಸಿ. ಎನ್. ಅಶ್ವತ್ಥ ನಾರಾಯಣ ಬೊಮ್ಮಾಯಿ ಸಂಪುಟದಲ್ಲಿಯೂ ಮುಂದುವರೆಯಲಿದ್ದಾರೆ.
ಒಕ್ಕಲಿಗ ಸಮುದಾಯದ ಆರ್. ಅಶೋಕ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಮಾತು ಬಹಳ ಪ್ರಬಲವಾಗಿ ಕೇಳಿ ಬಂದಿತ್ತು. ಆದರೆ ಹೈಕಮಾಂಡ್ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿ ಮಾಡಲು ಹೋದರೆ ಇಲ್ಲದ ರಂಪಾಟಕ್ಕೆ ಕಾರಣವಾಗಬಹದು ಎಂದು ಸಮ್ಮತಿ ನೀಡಿಲ್ಲ.
ಒಟ್ಟು 29 ಶಾಸಕರು ಸಂಪುಟ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದರಲ್ಲಿ 8 ಲಿಂಗಾಯತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, ಎಸ್ಟಿ ಮತ್ತು ರೆಡ್ಡಿ ತಲಾ 1, ಇಬ್ಬರು ಬ್ರಾಹ್ಮಣ ಹಾಗೂ ಒಬ್ಬ ಮಹಿಳೆಗೆ ಅವಕಾಶ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


