'ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು'
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೂತನ ಸಚಿವ ಸಂಪುಟ ರಚನೆ ಮಾಡುತ್ತಿದ್ದಂತೆಯೇ ಮೂಲ ಬಿಜೆಪಿಗರಲ್ಲಿ ಅಸಮಾಧಾನದ ಕಟ್ಟೆಯೊಡೆಯುತ್ತಿದೆ.

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನೂತನ ಸಚಿವ ಸಂಪುಟ ರಚನೆ ಮಾಡುತ್ತಿದ್ದಂತೆಯೇ ಮೂಲ ಬಿಜೆಪಿಗರಲ್ಲಿ ಅಸಮಾಧಾನದ ಕಟ್ಟೆಯೊಡೆಯುತ್ತಿದೆ.
ಈ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿದ್ದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ತಮ್ಮ ಪೋಸ್ಟ್‌ನಲ್ಲಿ ಅವರು, ‘ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು. ಕರ್ನಾಟಕವನ್ನು ದೇಶದಲ್ಲಿ ನಂಬರ್ 1 ಮಾಡಲು ತಾವೆಲ್ಲ ಶ್ರಮಿಸುತ್ತೀರೆಂದು ನಂಬಿರುತ್ತೇನೆ. ತಮ್ಮೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಶುಭವನ್ನುಂಟುಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಪಕ್ಷ ಕಟ್ಟಿ ಬೆಳೆಸಿ, ಅರ್ಹತೆ ಹೊಂದಿ ಸಚಿವರಾಗಿ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ನೂತನ ಸಚಿವರಿಗೆ ಅಭಿನಂದನೆಗಳು’ ಎನ್ನುವ ಶಾಸಕ ರಾಮದಾಸ್ ಅವರ ಮಾತು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕೆಲವರನ್ನು ಕುರಿತು ವ್ಯಂಗ್ಯ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


