ಸಿಎಂ ಬೊಮ್ಮಾಯಿ ಭೇಟಿಯಾದ ಕೇಂದ್ರದ ಮಾಜಿ ಸಚಿವ ಶರದ್ ಪವಾರ್
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.
ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಪವಾರ್ ಅವರು, ಕುಟುಂಬ ಸದಸ್ಯರೊಬ್ಬರ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದ್ದಾರೆಂದು ಹೇಳಲಾಗುತ್ತಿದೆ.
ಭೇಟಿ ವೇಳೆ ನೂತನ ಮುಖ್ಯಮಂತ್ರಿಗಳಿಗೆ ಪವಾರ್ ಅಭಿನಂದನೆ ಸಲ್ಲಿಸಿದ್ದು, ಕೆಲಕಾಲ ರಾಜಕೀಯ ವಿಚಾರಗಳ ಕುರಿತಂತೆಯೂ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಪವಾರ್ ಅವರು ಇನ್ನೂ 4-5 ದಿನಗಳ ಕಾಲ ಬೆಂಗಳೂರಿನಲ್ಲೇ ಉಳಿಯಲಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


