ರಾಜಕೀಯ

ಬೆಳಗಾವಿ ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಿತ್ತು: ಸತೀಶ್ ಜಾರಕಿಹೊಳಿ

ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿಯವರು ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಿತ್ತು: ಸತೀಶ್ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ
Published On :

ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿಯವರು ಅಭಿಪ್ರಾಯಪಟ್ಟಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು. 

ಯಾವ ಜಿಲ್ಲೆಗೆ ಎಷ್ಟು ಸ್ಥಾನ ಕೊಡಬೇಕು, ಆ ಜಿಲ್ಲೆಯಲ್ಲಿ ಎಷ್ಟು ಶಾಸಕರಿದ್ದಾರೆಂಬುದನ್ನು ಸರ್ಕಾರ ನಡೆಸುವವರು ವಿಚಾರ ಮಾಡಿ, ನಿರ್ಧಾರ ತೆಗೆದುಕೊಳ್ಳಬೇಕು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಬೆಳಗಾವಿಗೆ ಇನ್ನೂ ಕೆಲವರಿಗೆ ಸಚಿವಚ ಸ್ಥಾನ ನೀಡಿದರೇ ಅನುಕೂಡವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಕೂಡ ಆಗ್ರಹ ಮಾಡುತ್ತೇವೆಂದು ಹೇಳಿದರು. 

ಸರ್ಕಾರದ ಆಡಳಿತಾವಧಇ ಮುಂದಿನ ಕೆಲವೇ ತಿಂಗಳಾಗಿರುವುದರಿಂದ ಮತ್ತೆ ಜಿಲ್ಲೆಗೆ ಸಚಿವ ಸ್ಥಾನ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಸರ್ಕಾರ ಹಾಗೂ ಮುಖ್ಯಮಂತ್ರಿಗಳೇ ಈ ಬಗ್ಗೆ ಉತ್ತರ ಕೊಡಬೇಕು. ವಿರೋಧ ಪಕ್ಷದವರಾಗಿ ನಾವು ಈ ಬಗ್ಗೆ ಮಾತನಾಡಲು ಆಗುವುದಿಲ್ಲ ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.