ಸಂಪುಟ ಸ್ಥಾನಮಾನ: ಗುರು ಕಾಣಿಕೆ ತಿರಸ್ಕರಿಸಿದ ಯಡಿಯೂರಪ್ಪ
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಗೆ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ.

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಗೆ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ.
ತಮಗೆ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ರೀತಿ ಗುರುಕಾಣಿಕೆಯಾಗಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಆದೇಶ ಮಾಡಿದ್ದರು. ಏಕೋ ಏನೋ 24 ಗಂಟೆಯೊಳಗೆ ಸರಕಾರಿ ಆದೇಶವನ್ನು ಯಡಿಯೂರಪ್ಪ ನಯವಾಗಿಯೇ ತಿರಸ್ಕರಿಸಿದ್ದಾರೆ.
ಈ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ನಿಕಟ ಪೂರ್ವ ಮುಖ್ಯಮಂತ್ರಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳು ಮಾತ್ರ ನನಗೆ ಸಾಕು. ಸಂಪುಟ ದರ್ಜೆಯ ಸ್ಥಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


