ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಪದಗ್ರಹಣ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶುಕ್ರವಾರ ಎಂ.ಎಸ್.ರಕ್ಷಾ ರಾಮಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶುಕ್ರವಾರ ಎಂ.ಎಸ್.ರಕ್ಷಾ ರಾಮಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರು, ಎಐಸಿಸಿ ಪದಾಧಿಕಾರಿಗಳು ಭಾಗವಹಿಸಿದ್ದರು. ಇದರ ಜೊತೆಗೆ ಚುನಾಯಿತ ಪ್ರತಿನಿಧಿಗಳ ವಾಗ್ದಾನ ಸಮಾರಂಭ ಕೂಡ ನಡೆಯಿತು.
ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಕ್ಷಾ ರಾಮಯ್ಯ ಮತ್ತು ಮೊಹಮ್ಮದ್ ನಲಪಾಡ್ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು, ಎರಡೂ ಬಣಗಳ ಕಾರ್ಯಕರ್ತರ ನಡುವೆ ವಾಗ್ದಾಳಿಗಳು ನಡೆದಿದ್ದವು. ನಂತರ ಚುನಾವಣೆ ನಡೆಸಿದಾಗ ನಲಪಾಡ್ ಗೆ ಹೆಚ್ಚಿನ ಮತಗಳು ಬಂದಿದ್ದರೂ ಹಲವು ಅಪರಾಧ ಪ್ರಕರಣಗಳು ಅವರ ಮೇಲೆ ಇರುವುದರಿಂದ ಯುವ ಅಧ್ಯಕ್ಷರನ್ನಾಗಿ ಮಾಡಲಿಲ್ಲ.
ಇದು ಎರಡೂ ಬಣಗಳ ಮಧ್ಯೆ ಇನ್ನಷ್ಟು ದ್ವಂದ್ವ, ವಾಗ್ದಾಳಿಗೆ ಕಾರಣವಾಯಿತು. ನಂತರ ಪಕ್ಷದ ಹಿರಿಯರ ಸಮ್ಮುಖದಲ್ಲಿ ನಡೆದ ಸಂಧಾನದಂತೆ ಮುಂದಿನ ಫೆಬ್ರವರಿಯವರೆಗೆ ಅಧ್ಯಕ್ಷರಾಗಿ ಮುಂದುವರಿದು ನಂತರ ಆ ಸ್ಥಾನವನ್ನು ಮೊಹಮ್ಮದ್ ನಲಪಾಡ್ ಅವರಿಗೆ ಹಸ್ತಾಂತರ ಮಾಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


