ಕಾಂಗ್ರೆಸ್ ಭಾರತದ ಹಿಂದಿನ ಪಕ್ಷ, ಬಿಜೆಪಿ ವರ್ತಮಾನದ ಪಕ್ಷ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದು ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ನೆರೆ ದೇಶಗಳಲ್ಲಿ ಕೂಡ ಆತಂಕ ಆರಂಭವಾಗಿದೆ. ಆದರೆ ಭಾರತ ಇದನ್ನು ಸಮರ್ಥವಾಗಿ ದಿಟ್ಟವಾಗಿ ಎದುರಿಸಲಿದೆ. ಪರಿಸ್ಥಿತಿಯನ್ನು ಎದುರಿಸಲು ಸಾಕಷ್ಟು ಸ್ವ-ಸಾಮರ್ಥ್ಯ ಭಾರತಕ್ಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದು ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ನೆರೆ ದೇಶಗಳಲ್ಲಿ ಕೂಡ ಆತಂಕ ಆರಂಭವಾಗಿದೆ. ಆದರೆ ಭಾರತ ಇದನ್ನು ಸಮರ್ಥವಾಗಿ ದಿಟ್ಟವಾಗಿ ಎದುರಿಸಲಿದೆ. ಪರಿಸ್ಥಿತಿಯನ್ನು ಎದುರಿಸಲು ಸಾಕಷ್ಟು ಸ್ವ-ಸಾಮರ್ಥ್ಯ ಭಾರತಕ್ಕಿದೆ, ಗಡಿಯಲ್ಲಿನ ಭಯೋತ್ಪಾದನೆ ಬೆದರಿಕೆಗಳನ್ನು ಎದುರಿಸಲು ಸಹ ಸಜ್ಜಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಅಫ್ಘಾನಿಸ್ತಾನದ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಅಲ್ಲಿನ ಭಾರತೀಯ ನಿವಾಸಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಭಾರತೀಯರನ್ನು ರಕ್ಷಿಸಲು ಕೇಂದ್ರ ಸರ್ಕಾರ ಬದ್ಧವಿದೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತೀಯರ ರಕ್ಷಣೆಯ ಪ್ರಯತ್ನದಲ್ಲಿದ್ದೇವೆ. ಅಲ್ಲಿಯ ಜನರ ಜೀವನ ಕಾಪಾಡುವುದು ಅತ್ಯವಶ್ಯಕವಿದೆ. ಅಮೆರಿಕ ಸರ್ಕಾರ ಅಲ್ಲಿನ ಜನರ ರಕ್ಷಣೆ ಬಗ್ಗೆ ಕಾಳಜಿ ತೋರಬೇಕು ಎಂದು ಹೇಳಿದರು.
ನಾಡಿದ್ದು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮುಂದಿನ ಗುರುವಾರ ಪ್ರಕಟಿಸಲಾಗುವುದು. ವಾರ್ಡ್ ಅಧ್ಯಕ್ಷರ ಮೂಲಕ ಬರುವ ಆಕಾಂಕ್ಷಿಗಳ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಆಕಾಂಕ್ಷಿಗಳು ಮಂಗಳವಾರ ಸಂಜೆಯೊಳಗೆ ಅರ್ಜಿಗಳನ್ನು ವಾರ್ಡ್ ಅಧ್ಯಕ್ಷರಿಗೆ ಸಲ್ಲಿಸಬೇಕು. ವಾರ್ಡ್ ಅಧ್ಯಕ್ಷರು ಆ ಅರ್ಜಿಗಳನ್ನು ಮಂಡಲ ಅಧ್ಯಕ್ಷರಿಗೆ ನೀಡಬೇಕು. ಅವರು ಅರ್ಜಿಗಳನ್ನು ಸ್ಕ್ರೀನಿಂಗ್ ಕಮಿಟಿಗೆ ನೀಡುತ್ತಾರೆ. ಗುರುವಾರ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು ಎಂದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಟೀಕೆ ನಡೆಸಿದ ಅವರು ಕಾಂಗ್ರೆಸ್ ಕಳೆದುಹೋದ ಭೂತ ಕಾಲದ ಪಕ್ಷ, ಈಗ ಪ್ರಸ್ತುತತೆ ಹೊಂದಿರುವ ಪಕ್ಷವೊಂದೇ ಅದು ಬಿಜೆಪಿ, ಇನ್ನು, ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇಲ್ಲ. ಆ ಪಕ್ಷದ ಅಸ್ತಿತ್ವ ಕೇವಲ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಇದೆ. ಬಿಜೆಪಿಯಲ್ಲಿ ಟಿಕೆಟ್ಗೆ ಅರ್ಜಿ ಪಡೆಯಲು ಶುಲ್ಕ ಪಡೆಯಲಾಗುತ್ತಿಲ್ಲ. ಕಾಂಗ್ರೆಸ್ನಂತೆ ಅರ್ಜಿಯಿಂದ ಹಣ ಮಾಡುವ ಅನಿವಾರ್ಯತೆ ನಮ್ಮ ಪಕ್ಷಕ್ಕೆ ಇಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


