ಶೋಭಾ ಕರಂದ್ಲಾಜೆ ತಕ್ಷಣ ರೈತರ ಕ್ಷಮೆಯಾಚಿಸಬೇಕು: ಸಿದ್ದರಾಮಯ್ಯ ಆಗ್ರಹ
ರೈತರ ಕುರಿತಂತೆ ಹೇಳಿಕೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಂಗಳೂರು: ರೈತರ ಕುರಿತಂತೆ ಹೇಳಿಕೆ ನೀಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರದ ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು 'ದಲ್ಲಾಳಿಗಳು', 'ಮಧ್ಯವರ್ತಿಗಳು' ಎಂದು ಅವಮಾನಿಸಿರುವ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಖಂಡನೀಯ ಎಂದಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಕ್ಷಣ ತಮ್ಮ ಹೇಳಿಕೆಯನ್ನು ವಾಪಸು ಪಡೆದು ರೈತರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ರೈತ ಹೋರಾಟಗಾರರು 'ದಲ್ಲಾಳಿಗಳು', 'ಮಧ್ಯವರ್ತಿಗಳು' ಎಂಬ ಸಚಿವೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಸರ್ಕಾರದ ಅಧಿಕೃತ ನಿಲುವಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ಒಪ್ಪಿಕೊಳ್ಳಬೇಕು, ಇಲ್ಲವಾದರೆ ಈ ಬಗ್ಗೆ ಸ್ಪಷ್ಟನೆ ನೀಡಿದ ಅಧಿಕ ಪ್ರಸಂಗಿ ಸಚಿವೆಯ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಟ್ವೀಟ್ ನಲ್ಲಿ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಪ್ರೊ. ಎಂ.ಡಿ. ನಂಜುಂಡ ಸ್ವಾಮಿಯವರಂತಹ ಹಿರಿಯರು ಮುನ್ನಡೆಸಿದ್ದ ರೈತ ಹೋರಾಟಕ್ಕೆ ಹೆಮ್ಮೆಯ ಪರಂಪರೆ ಇದೆ. ಇದೇನು ಅಧಿಕಾರಕ್ಕಾಗಿ, ಸಚಿವ ಸ್ಥಾನಕ್ಕಾಗಿ ನಡೆಸುವ ರಾಜಕೀಯ ದಲ್ಲಾಳಿಗಿರಿ ಹೋರಾಟ ಅಲ್ಲ ಎನ್ನುವುದನ್ನು ಶೋಭಾಕರಂದ್ಲಾಜೆ ಅವರಂತಹವರು ತಿಳಿದುಕೊಳ್ಳುವುದು ಒಳಿತು ಎಂದು ವ್ಯಂಗವಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


