ರಾಜಕೀಯ

ಕಾರ್ಪೋರೇಷನ್ ಚುನಾವಣೆಗೆ ಬಿಜೆಪಿ ಪಕ್ಷದ ಉಸ್ತುವಾರಿಗಳ ಪಟ್ಟಿ ಬಿಡುಗಡೆ

ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಕಾರ್ಪೋರೇಷನ್ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಪಕ್ಷ ಉಸ್ತುವಾರಿಗಳನ್ನು ನೇಮಕ ಮಾಡಿದ್ದು, ಪ್ರತೀ ಜಿಲ್ಲೆಗೆ ತಲಾ 3 ನಾಯಕರಿಗೆ ಜವಾಬ್ದಾರಿ ನೀಡಿದೆ.

ಕಾರ್ಪೋರೇಷನ್ ಚುನಾವಣೆಗೆ ಬಿಜೆಪಿ ಪಕ್ಷದ ಉಸ್ತುವಾರಿಗಳ ಪಟ್ಟಿ ಬಿಡುಗಡೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲಬುರಗಿ ಕಾರ್ಪೋರೇಷನ್ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಪಕ್ಷ ಉಸ್ತುವಾರಿಗಳನ್ನು ನೇಮಕ ಮಾಡಿದ್ದು, ಪ್ರತೀ ಜಿಲ್ಲೆಗೆ ತಲಾ 3 ನಾಯಕರಿಗೆ ಜವಾಬ್ದಾರಿ ನೀಡಿದೆ.

ಹುಬ್ಬಳ್ಳಿ-ಧಾರವಾಡಕ್ಕೆ ಶಂಕರ್ ಪಾಟೀಲ್ ಮುನೇನಕೊಪ್ಪ, ಲಕ್ಷ್ಮಣ್ ಸವದಿ ಮತ್ತು ಮಹೇಶ್ ತೆಂಗಿನಕಾಯಿ ಅವರಿಗೆ ಜವಾಬ್ದಾರಿ ನೀಡಿದ್ದು, ಬೆಳಗಾವಿಯಲ್ಲಿ ಗೋವಿಂದ್ ಕಾರಜೋಳ, ಸತೀಶ್ ರೆಡ್ಡಿ ಮತ್ತು ಅಭಯ್ ಪಾಟೀಲ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

ಅಂತೆಯೇ ಕಲಬುರಗಿಗೆ ಮುರುಗೇಶ್ ನಿರಾಣಿ, ಎನ್ ರವಿಕುಮಾರ್ ಮತ್ತು ದತ್ತಾತ್ರೆಯೇ ಪಾಟೀಲ್ ರೇವೂರ್ ರಿಗೆ ಉಸ್ತುವಾರಿ ನೀಡಲಾಗಿದೆ.

ಇವರ ಜೊತೆಗೇ ಆಯಾ ಕ್ಷೇತ್ರದ ಸಂಸದರು, ಶಾಸಕರು ಮತ್ತು ಸ್ಥಳೀಯ ಮುಖಂಡರು ಚುನಾವಣಾ ತಂಡಗಳಲ್ಲಿರುತ್ತಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.