ಪ್ರಬಲ ಮುಸ್ಲಿಂ ನಾಯಕರಿಗೆ ಕಿರುಕುಳ ನೀಡುವ ಪ್ರಯತ್ನ: ನಾನು ಮನೆ ಕಟ್ಟಿಸಿದ್ದೇ ದೊಡ್ಡ ಅಪರಾಧವೇ?
ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ.

ಬೆಂಗಳೂರು: ದೇಶದ ವಿವಿಧ ರಾಜ್ಯಗಳ ಪ್ರಬಲ ಮುಸ್ಲಿಂ ನಾಯಕರ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಅವರಿಗೆ ಕಿರುಕುಳ ನೀಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಷಡ್ಯಂತ್ರದ ಭಾಗವಾಗಿ ನನ್ನ ಮೇಲೂ ಹಲವು ರೀತಿ ದಾಳಿಗಳಾಗುತ್ತಿವೆ. ಆದರೆ ಇದ್ಯಾವುದಕ್ಕೂ ನಾನು ಹೆದರುವುದಿಲ್ಲ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಜಮೀರ್ ಅಹ್ಮದ್ ಖಾನ್, ನನ್ನ ಆಸ್ತಿಯೆಂದರೆ ನನ್ನ ಜನ. ನಾನು ರಾಜಕೀಯ ಜೀವನದಲ್ಲಿರುವವರೆಗೆ ನನ್ನ ಜನ ತಲೆತಗ್ಗಿಸುವಂತ ಯಾವ ಕೆಲಸವನ್ನೂ ಮಾಡುವುದಿಲ್ಲ. ನನ್ನ ಆಸ್ತಿಯೂ ಅವರೇ.ಇ.ಡಿ ದಾಳಿಯಿಂದ ಹಲವರ ಅನುಮಾನಗಳು ಪರಿಹಾರವಾದದ್ದೇ ನನಗೆ ಖುಷಿಯ ವಿಚಾರ ಎಂದು ಹೇಳಿದ್ದಾರೆ.
ನಾನು ಮನೆಯನ್ನು ಕಟ್ಟಿಸಿದ್ದೆ ದೊಡ್ಡ ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಈ ಕಾರಣಕ್ಕಾಗಿ ನನ್ನ ಮೇಲೆ ಇ.ಡಿ ದಾಳಿಯಾಯಿತು. ಇ.ಡಿ ಯವರು ಯಾವ ನಿರೀಕ್ಷೆಯಿಂದ ನನ್ನ ಮೇಲೆ ದಾಳಿ ಮಾಡಿದ್ದರೋ ಆ ಎಲ್ಲಾ ನಿರೀಕ್ಷೆಗಳು ಹುಸಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


