ಜಾತಿಗಣತಿ ವರದಿ: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
ಜಾತಿ ಗಣತಿ ವರದಿ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ಚರ್ಚೆಯಲ್ಲಿ ತೊಡಗಿದ್ದು, ಇದರಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಜಾತಿ ಗಣತಿ ವರದಿ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ಚರ್ಚೆಯಲ್ಲಿ ತೊಡಗಿದ್ದು, ಇದರಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ದಿ. ರಾಜೀವ್ ಗಾಂಧಿ ಹಾಗೂ ದಿ. ದೇವರಾಜು ಅರಸು ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಅಧಿಕಾರದಲ್ಲಿದ್ದಾಗ ಆರಂಭಿಸಿದ್ದ ಜಾತಿ ಗಣತಿ ಸಮೀಕ್ಷೆ ಹಳ್ಳ ಹಿಡಿಯಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಕಾರಣ. ಸಮ್ಮಿಶ್ರ ಸರ್ಕಾರದಲ್ಲಿ ಜಗಳ ಮಾಡುವುದು ಬೇಡ ಎಂದು ನಾನು ಆ ಸಂದರ್ಭದಲ್ಲಿ ಸುಮ್ಮನಿದ್ದೆ ಎಂದು ಹೇಳಿದ್ದಾರೆ.
ನಾನು ಅಧಿಕಾರದಲ್ಲಿದ್ದಾಗ ಆರಂಭಿಸಿದ್ದ ಜಾತಿ ಗಣತಿ ಸಮೀಕ್ಷೆ ಹಳ್ಳ ಹಿಡಿಯಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಕಾರಣ. ಸಮ್ಮಿಶ್ರ ಸರ್ಕಾರದ ಆಡಳಿತವಿದ್ದಾಗ ವರದಿ ಸಿದ್ದವಾಗಿತ್ತು. ಆದರೆ ವರದಿಯನ್ನು ತೆಗೆದುಕೊಳ್ಳದಂತೆ ಹಿಂದುಳಿದ ವರ್ಗಗಳ ಸಚಿವರಾಗಿದ್ದ ಪುಟ್ಟರಂಗ ಶೆಟ್ಟಿ ಅವರಿಗೆ ಹೆಚ್'ಡಿಕೆ ಬೈದಿದ್ರು, ಆ ವರದಿಯಲ್ಲಿ ಪ್ರತಿ ಜಾತಿಯ ಆರ್ಥಿಕ ಸ್ಥಿತಿಗತಿ ಅಂಕಿ ಅಂಶವಷ್ಟೇ ಇರೋದು. ವರದಿ ಸ್ವೀಕರಿಸಲು ಸರ್ಕಾರ ಹಿಂದೇಟು ಹಾಕಿದ್ದೇಕೆ? ಈ ವರದಿ ಯಾವುದೇ ಜನಾಂಗದ ವಿರುದ್ಧವೂ ಇರಲಿಲ್ಲ. ವರದಿ ಸ್ವೀಕರಿಸದಂತೆ ಹೆಚ್'ಡಿಕೆ ಅವರು ಪುಟ್ಟರಂಗಶೆಟ್ಟಿಯನ್ನು ಬೈದಿದ್ದಾಗ ನಾನು ಸಮ್ಮಿಶ್ರ ಸರ್ಕಾರದಲ್ಲಿ ಜಗಳ ಬೇಡ ಎಂದು ಸುಮ್ಮನಿದ್ದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕವರದಿ ಕೂಡಲೇ ಅನುಷ್ಠಾನಗೊಳಿಸಬೇಕು. ಹಿಂದುಳಿದ ವರ್ಗಗಳ ಆಯೋಗವು ಯಾವುದೇ ಒಂದು ಜಾತಿ ಪರವಾಗಿ ವರದಿ ಸಿದ್ಧಪಡಿಸಿಲ್ಲ. ಹೀಗಾಗಿ ಬಿಜೆಪಿಯವರು ಹಿಂದುಳಿದ, ಶೋಷಿತ ವರ್ಗಗಳ ಪರವಾಗಿದ್ದರೆ ವರದಿ ಜಾರಿಗೊಳಿಸಲಿ ಎಂದು ಒತ್ತಾಯಿಸಿದ್ದಾರೆ.
ಎಲ್ಲಾ ಜಾತಿಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿಯನ್ನು ಸಮೀಕ್ಷೆ ನಡೆಸಲಾಗಿದೆ. ಸರ್ಕಾರಿ ಶಾಲಾ ಶಿಕ್ಷಕರ ನೆರವಿನಿಂದ ತಯಾರಿಸಿದ ವರದಿಯೇ ಹೊರತು ಖಾಸಗಿಯವರು ಮಾಡಿರುವುದಲ್ಲ. ದೇಶದ ಸಂಪತ್ತು, ಅಧಿಕಾರ ಸಮಾನವಾಗಿ ಹಂಚಿಕೆಯಾಗಲು ಈ ಅಂಕಿ-ಅಂಶ ಅಗತ್ಯ. ಹೀಗಾಗಿ ಮೊಸರಲ್ಲಿ ಕಲ್ಲು ಹುಡುಕುವ ಬದಲು ಬಿಜೆಪಿ ವರದಿ ಸ್ವೀಕರಿಸಿ ಅನುಷ್ಠಾನಗೊಳಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


