2023ರ ವಿಧಾನಸಭೆ ಚುನಾವಣೆಯೇ ನನ್ನ ಜೀವನದ ಕೊನೆಯ ಹೋರಾಟ: ಎಚ್.ಡಿ ಕುಮಾರಸ್ವಾಮಿ
2023ರ ಚುನಾವಣೆಯೇ ನನ್ನ ಜೀವನದ ಕೊನೆಯ ಹೋರಾಟ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹಾವೇರಿ: 2023ರ ಚುನಾವಣೆಯೇ ನನ್ನ ಜೀವನದ ಕೊನೆಯ ಹೋರಾಟ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಎರಡು ವರ್ಷಗಳ ಕಾಲ ನಾಡಿನ ಪ್ರತಿ ಕುಟುಂಬದ ಸಮಸ್ಯೆ ಕೇಳಲು ಪ್ರಯತ್ನಿಸುವುದಾಗಿ ಹೇಳಿದರು.
ರಾಜ್ಯದಲ್ಲಿ ಬಿಜೆಪಿಯಂತಹ ಕೆಟ್ಟ ಸರ್ಕಾರ ಬರಲು ಕಾಂಗ್ರೆಸ್ ನಾಯಕರೇ ಕಾರಣ ಎಂದು ಆರೋಪಿಸಿದ ಕುಮಾರ ಸ್ವಾಮಿ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ವಿರುದ್ಧವೂ ವಾಗ್ದಾಳಿ ನಡೆಸಿದರು.
ನಾನು ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಯಾವ ನೀರಾವರಿ ಅಥವಾ ರಸ್ತೆ ಯೋಜನೆಗೆ ಅನುಮೋದನೆ ನೀಡಲಿಲ್ಲ. ಬದಲಿಗೆ ರೈತರ 25 ಸಾವಿರ ಕೋಟಿ ಸಾಲಮನ್ನಾ ಮಾಡಿದೆ. ಇದರಿಂದ ನನಗೇನು ಲಾಭವಿಲ್ಲ. ಅದೇ ನೀರಾವರಿ, ರಸ್ತೆ ನಿರ್ಮಾಣ ಯೋಜನೆಗೆ ಮುಂದಾಗಿದ್ದರೆ ಪ್ರತಿಶತ 10ರಷ್ಟು ಕಮೀಷನ್ ಬರುತ್ತಿತ್ತು ಎಂದು ಕುಮಾರಸ್ವಾಮಿ ತಿಳಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


