ರಾಜಕೀಯ

ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ದೂರು ದಾಖಲು

ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಈಶ್ವರಪ್ಪ ವಿರುದ್ಧ ದೂರು ದಾಖಲು
ಈಶ್ವರಪ್ಪ
Published On :

ಶಿವಮೊಗ್ಗ: ಕಾಂಗ್ರೆಸ್ ನಾಯಕರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್ ಪಿ ಗಿರೀಶ್ ಮತ್ತು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ಎಂಬುವರು ಈಶ್ವರಪ್ಪ ವಿರುದ್ಧ ದೂರು ದಾಖಲಿಸಿದ್ದಾರೆ.

ಆಗಸ್ಟ್ 8 ರಂದು ಮಠ ಮಾಂಗಲ್ಯ ಮಂದಿರದಲ್ಲಿ ನಡೆದ ನಗರ ಬಿಜೆಪಿ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಚಿವರ ಪ್ರಚೋದನಕಾರಿ ಹೇಳಿಕೆಗಳನ್ನು ಗಿರೀಶ್ ತಮ್ಮ ದೂರಿನಲ್ಲಿ (ನಂ. 397/2021) ಉಲ್ಲೇಖಿಸಿದ್ದಾರೆ ಮತ್ತು ಈ ಹೇಳಿಕೆ ಕೋಮು ಘರ್ಷಣೆಗೆ ಕಾರಣವಾಗಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದಾಗ  ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರವೀಣ್ ಕುಮಾರ್ ಆರೋಪಿಸಿದ್ದಾರೆ. ಕೋಟೆ ಪೊಲೀಸರು ಆಗಸ್ಟ್ 11 ರಂದು ದೂರು (ಸಂಖ್ಯೆ 398/2021) ದಾಖಲಿಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.