ಜಿಟಿ ದೇವೇಗೌಡ ತಮಗೆ ಮತ್ತು ತಮ್ಮ ಮಗನಿಗೆ ಕಾಂಗ್ರೆಸ್ ಟಿಕೆಟ್ ಕೇಳಿರುವುದು ಸತ್ಯ: ಸಿದ್ದರಾಮಯ್ಯ
10 ದಿನಗಳ ಪ್ರಕೃತಿ ಚಿಕಿತ್ಸೆಯ ಬಳಿಕ ವಿಧಾನಸಭೆಯ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳಾರ ಮನೆಗೆ ಮರಳಿದ್ದಾರೆ.

ಬೆಂಗಳೂರು: 10 ದಿನಗಳ ಪ್ರಕೃತಿ ಚಿಕಿತ್ಸೆಯ ಬಳಿಕ ವಿಧಾನಸಭೆಯ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳಾರ ಮನೆಗೆ ಮರಳಿದ್ದಾರೆ.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಜತೆ ಮಾತಾಡಿದ್ದಾರೆ. ತಮಗೆ, ಮತ್ತು ಅವರ ಮಗ ಹರೀಶ್ ಸೇರಿ ಇಬ್ಬರಿಗೂ ಟಿಕೆಟ್ ಕೇಳಿರುವುದು ಸತ್ಯ ಎಂದರು.
ಆದರೆ ಯಾವ ಕ್ಷೇತ್ರದಿಂದ ಎಂಬುದನ್ನು ಬಹಿರಂಗ ಪಡಿಸಿಲ್ಲ, ಈ ಕುರಿತು ಪಕ್ಷದ ಉಸ್ತುವಾರಿ ರಂದೀಪ್ ಸುರ್ಜೇವಾಲ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಫ್ಯೂಸ್ ಕಿತ್ತು ಹಾಕಿದ್ದೇನೆ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಅಸಲಿ ಬಣ್ಣ ಬಯಲಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜನತೆಗೆ ನಿಜ ಗೊತ್ತಾಗಲಿದೆ. ಜೆಡಿಎಸ್ ಎಲ್ಲಿಗೆ ಹೋಗಿ ನಿಲ್ಲಲಿದೆ ಎಂಬುದನ್ನೂ ಜನತೆಯೇ ತೀರ್ಮಾನಿಸಲಿದ್ದಾರೆ ಎಂದೂ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಇನ್ನು ಹಳೆ ಮೈಸೂರು ಭಾಗದಲ್ಲಿ ಆಪರೇಷನ್ ಜೆಡಿಎಸ್ ವಿಚಾರದ ಬಗ್ಗೆ ಮಾತನಾಡಿದ ಅವರು ಅದರ ಬಗ್ಗೆ ನನಗೆ ಗೊತ್ತಿಲ್ಲ. ಜಿ.ಡಿ.ದೇವೇಗೌಡ ಬಿಟ್ಟರೆ ಬೇರೆ ಯಾರು ನನ್ನನ್ನ ಸಂಪರ್ಕಿಸಿಲ್ಲ. ತಮಗೂ ಮತ್ತು ಪುತ್ರನಿಗೆ ಕ್ಷೇತ್ರ ಕೊಡುವಂತೆ ಕೇಳಿದ್ದಾರೆ. ಹೈಕಮಾಂಡ್ ಜತೆ ಚರ್ಚೆ ಮಾಡಬೇಕು ಎಂದು ಹೇಳಿದ್ದೇವೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


