ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್: ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ನೋಡಿ ಕಲಿಯಿರಿ!
ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ತನ್ನ ವಾಗ್ದಾಳಿ ಮುಂದುವರಿಸಿದೆ. ರಾಜ್ಯದ ಬಿಜೆಪಿ ಸಂಸದರು ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ತೀಕ್ಷ್ಣವಾಗಿ ತಿರುಗೇಟು ನೀಡಿದೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ತನ್ನ ವಾಗ್ದಾಳಿ ಮುಂದುವರಿಸಿದೆ. ರಾಜ್ಯದ ಬಿಜೆಪಿ ಸಂಸದರು ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ತೀಕ್ಷ್ಣವಾಗಿ ತಿರುಗೇಟು ನೀಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ‘ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ನಡೆಸುವುದಕ್ಕೂ ಪೈಪೋಟಿ ಇದೆ ಖಂಡ್ರೆಯವರೇ, ಏಕೋ ನಿಮ್ಮ ವೇಗ ಕಡಿಮೆಯಾಯ್ತು, ಹೀಗಾಗಿ ಇನ್ನೂ ಕಾರ್ಯಾಧ್ಯಕ್ಷ ಸ್ಥಾನದಲ್ಲೇ ಇದ್ದೀರಿ. ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ಅವರನ್ನು ನೋಡಿ ಕಲಿಯಿರಿ’ ಎಂದು ಲೇವಡಿ ಮಾಡಿದೆ.
‘ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್. ನೆಹರು, ಇಂದಿರಾ, ರಾಜೀವ್ ಮತ್ತು ಸೋನಿಯಾ ಗಾಂಧಿಯವರ ಪದತಲದಲ್ಲಿ ಗುಲಾಮಗಿರಿ ಮಾಡಿದ್ದಕ್ಕಾಗಿಯೇ ಮುಖ್ಯಮಂತ್ರಿ ಪದವಿ ಅಲಂಕರಿಸಿದ ಮಹಾನುಭಾವರ ಪಟ್ಟಿ ಬೇಕೇ ಖಂಡ್ರೆಯವರೇ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಬಿಜೆಪಿ ಪ್ರಶ್ನಿಸಿದೆ.
ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್. ನೆಹರು, ಇಂದಿರಾ, ರಾಜೀವ್ ಮತ್ತು ಸೋನಿಯಾ ಗಾಂಧಿಯವರ ಪದತಲದಲ್ಲಿ ಗುಲಾಮಗಿರಿ ಮಾಡಿದ್ದಕ್ಕಾಗಿಯೇ ಮುಖ್ಯಮಂತ್ರಿ ಪದವಿ ಅಲಂಕರಿಸಿದ ಮಹಾನುಭಾವರ ಪಟ್ಟಿ ಬೇಕೇ ಖಂಡ್ರೆಯವರೇ? ಕುಟುಂಬ ಭಜಕರು ಎಂದು ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


