2023ರ ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ಟಿಎಂಸಿ ಕಣ್ಣು: ರಾಜ್ಯ ಕಾಂಗ್ರೆಸ್ ನಾಯಕರ ಓಲೈಕೆ!
ಇತ್ತೀಚೆಗೆ ಮಾಜಿ ಸಚಿವ ಎಂ ಬಿ ಪಾಟೀಲ್ ಅವರನ್ನು ಟಿಎಂಸಿ ಪರವಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಭೇಟಿ ಮಾಡಿದ್ದರು ಎಂಬ ವರದಿಗಳು ಕೇಳಿ ಬಂದಿದ್ದವು, ಆದರೆ ಇದೆಲ್ಲಾ ಸುಳ್ಳು ಎಂದು ತಳ್ಳಿ ಹಾಕಿದ್ದರು.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮೇಲೆ ತೃಣಮೂಲ ಕಾಂಗ್ರೆಸ್ ಕಣ್ಣಿಟ್ಟಿದೆ.
ಇತ್ತೀಚೆಗೆ ಮಾಜಿ ಸಚಿವ ಎಂ ಬಿ ಪಾಟೀಲ್ ಅವರನ್ನು ಟಿಎಂಸಿ ಪರವಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಭೇಟಿ ಮಾಡಿದ್ದರು ಎಂಬ ವರದಿಗಳು ಕೇಳಿ ಬಂದಿದ್ದವು, ಆದರೆ ಇದೆಲ್ಲಾ ಸುಳ್ಳು ಎಂದು ತಳ್ಳಿ ಹಾಕಿದ್ದರು.
ಪ್ರಶಾಂತ್ ಕಿಶೋರ್ ನಿಜವಾಗಿಯೂ ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅದರ ಬಗ್ಗೆ ಅವರಿಗೆ ತಿಳಿದಿದೆ ಎಂದು ಉನ್ನತ ಸ್ಥಾನದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಆದರೆ ಈ ವಿಷಯದ ಬಗ್ಗೆ ಈಗ ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಕೆಲವು ಪ್ರಮುಖ ನಾಯಕರನ್ನು ಪ್ರಶಾಂತ್ ಕಿಶೋರ್ ಸಂಪರ್ಕಿಸಿದ್ದಾರೆ. ವಿಧಾನಪರಿಷತ್ ಸದಸ್ಯರಾಗಿರುವ ರಾಜಕೀಯ ಮ್ಯಾನೇಜರ್ ಟಿಎಂಸಿ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೋವಾದಲ್ಲಿ ಕಾಂಗ್ರೆಸ್ ಜಿಎಫ್ ಪಿ ಮೈತ್ರಿ ಮಾಡಿಕೊಂಡಿದ್ದು, ಕರ್ನಾಟಕದಲ್ಲಿಯೂ ಅದೇ ರೀತಿ ಟಿಎಂಸಿ ತಂತ್ರ ರೂಪಿಸಲು ಮುಂದಾಗಿದೆ, ಬುಧವಾರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿ ಮಾಡಲು ಮುಂಬೈಗೆ ಬಂದಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಲ್ಲಾ ಪ್ರಾದೇಶಿಕ ಪಕ್ಷಗಳು ಒಗ್ಗೂಡಿದರೆ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೋಲಿಸುವುದು ತುಂಬಾ ಸುಲಭ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


